Select Your Language

Notifications

webdunia
webdunia
webdunia
webdunia

Champions Trophy: ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಗೆಲುವಿಗೆ ಶುಬ್ಮನ್ ಗಿಲ್ ಶತಕವೇ ಆಧಾರ

Shubman Gill

Krishnaveni K

ದುಬೈ , ಗುರುವಾರ, 20 ಫೆಬ್ರವರಿ 2025 (21:52 IST)
Photo Credit: X
ದುಬೈ: ಚಾಂಪಿಯನ್ಸ್ ಟ್ರೋಫಿ 2025 ರ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಶುಬ್ಮನ್ ಗಿಲ್ ಶತಕದ ನೆರವಿನಿಂದ ಟೀಂ ಇಂಡಿಯಾ ಗೆಲುವು ಕಾಣುವಂತಾಯಿತು. ಮೊದಲ ಪಂದ್ಯವನ್ನು 6 ವಿಕೆಟ್ ಗಳಿಂದ ಗೆದ್ದ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಶುಭಾರಂಭ ಮಾಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 49.4 ಓವರ್ ಗಳಲ್ಲಿ 228 ರನ್ ಗಳಿಗೆ ಆಲೌಟ್ ಆಯಿತು. ಬಾಂಗ್ಲಾ ಪರ ತೌಹೀದ್ ಹೃದಯ್ 100 ರನ್ ಗಳಿಸಿದರು. ಭಾರತದ ಪರ ಮೊಹಮ್ಮದ್ ಶಮಿ 5 ವಿಕೆಟ್ ಗಳ ಗೊಂಚಲು ಪಡೆಯುವ ಮೂಲಕ ಭರ್ಜರಿ ಬೌಲಿಂಗ್ ಮಾಡಿದರು. ಅವರಿಗೆ ಸಾಥ್ ನೀಡಿದ ಹರ್ಷಿತ್ ರಾಣಾ 3 ವಿಕೆಟ್ ಪಡೆದರೆ ಅಕ್ಸರ್ ಪಟೇಲ್ 2 ವಿಕೆಟ್ ಕಬಳಿಸಿದರು.

ಈ ಮೊತ್ತ ಬೆನ್ನತ್ತಿದ ಭಾರತಕ್ಕೆ ರೋಹಿತ್ ಶರ್ಮಾ-ಶುಬ್ಮನ್ ಗಿಲ್ ಜೋಡಿ ಉತ್ತಮ ಆರಂಭ ನೀಡಿತು. ಆದರೆ ಅರ್ಧಶತಕದ ಜೊತೆಯಾಟವಾಡಿದ ಬಳಿಕ ಎಂದಿನಂತೆ 40 ಪ್ಲಸ್ ಸ್ಕೋರ್ ಗಳಿಸಿ ರೋಹಿತ್ ಔಟಾದರು. ಬಳಿಕ ಬಂದ ವಿರಾಟ್ ಕೂಡಾ ಹೆಚ್ಚು ಹೊತ್ತು ನಿಲ್ಲಲಿಲ್ಲ. ಅವರ ಕೊಡುಗೆ ಕೇವಲ 22 ರನ್. ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಮಿಂಚಿದ್ದ ಶ್ರೇಯಸ್ ಅಯ್ಯರ್ 15 ರನ್ ಗಳಿಸಿ ಔಟಾದಾಗ ಭಾರತ ಸಂಕಷ್ಟಕ್ಕೀಡಾಯಿತು.

ಆದರೆ ಇನ್ನೊಂದೆಡೆ ಏಕಾಂಗಿಯಾಗಿ ಹೋರಾಟ ನಡೆಸಿದ ಶುಬ್ಮನ್ ಗಿಲ್ 129 ಎಸೆತಗಳನ್ನು ಎದುರಿಸಿ ಅಜೇಯರಾಗಿ 101 ರನ್ ಗಳಿಸಿದರು. ಇದು ಏಕದಿನ ಪಂದ್ಯಗಳಲ್ಲಿ ಅವರ 8 ನೇ ಶತಕವಾಗಿತ್ತು. ವಿಶೇಷವೆಂದರೆ ಕಳೆದ ನಾಲ್ಕು ಏಕದಿನ ಪಂದ್ಯಗಳಲ್ಲಿ ಎರಡು ಅರ್ಧಶತಕ, ಎರಡು ಶತಕ ಗಳಿಸಿ ಭರ್ಜರಿ ಫಾರ್ಮ್ ಪ್ರದರ್ಶಿಸಿದರು. ಕೆಎಲ್ ರಾಹುಲ್ ಕೂಡಾ ಅವರಿಗೆ ಸಾಥ್ ನೀಡಿದ್ದು 47 ಎಸೆತ ಎದುರಿಸಿ ಅಜೇಯ 41 ರನ್ ಗಳಿಸಿದರು. ಅಂತಿಮವಾಗಿ ಭಾರತ 46.3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವು ಕಂಡಿತು.

Share this Story:

Follow Webdunia kannada

ಮುಂದಿನ ಸುದ್ದಿ

ICC Champions Trophy : ಭಾರತಕ್ಕೆ ಸವಾಲಿನ ಗುರಿ ನೀಡಿದ ಬಾಂಗ್ಲಾದೇಶ