ಮುಂಬೈ: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಆದರೆ ಇದೀಗ ತಂಡದಲ್ಲಿ ಒಂದು ಬದಲಾವಣೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಯುವ ಸ್ಪಿನ್ನರ್ ವರುಣ್ ಚಕ್ರವರ್ತಿ ಅದ್ಭುತ ಪ್ರದರ್ಶನ ನೀಡಿದ್ದರು. ಆದರೆ ಅವರು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಅವರು ಆಯ್ಕೆಯಾಗಿಲ್ಲ.
ಆದರೆ ಈಗ ಟಿ20 ಸರಣಿಯ ಪ್ರದರ್ಶನ ಗಮನಿಸಿ ತಂಡದಲ್ಲಿ ಅವರನ್ನು ಸೇರಿಸಿಕೊಳ್ಳಬಹುದು ಎಂದು ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ. ಆದರೆ ಅವರಿಗಾಗಿ ಸ್ಥಾನ ಬಿಟ್ಟುಕೊಡಲು ಯಾರು ತಯಾರಾಗಬಹುದು ಎಂದೂ ಪ್ರಶ್ನೆ ಮಾಡಿದ್ದಾರೆ.
ಸದ್ಯಕ್ಕೆ ತಾತ್ಕಾಲಿಕ ತಂಡವನ್ನಷ್ಟೇ ಪ್ರಕಟಿಸಲಾಗಿದೆ. ಆದರೆ ವರುಣ್ ಅದ್ಭುತ ಫಾರ್ಮ್ ನಲ್ಲಿದ್ದು ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು ಎಂದು ನನಗೆ ಅನಿಸುತ್ತಿದೆ ಎಂದು ಅಶ್ವಿನ್ ಹೇಳಿದ್ದಾರೆ. ಆದರೆ ಸದ್ಯಕ್ಕೆ ಟೀಂ ಇಂಡಿಯಾ ಸ್ಥಾನ ಬಿಟ್ಟುಕೊಡುವಂತಹ ಆಟಗಾರರು ಯಾರೂ ಇಲ್ಲ. ಹೀಗಾಗಿ ವರುಣ್ ಗೆ ಹೇಗೆ ಸ್ಥಾನ ಮಾಡಿಕೊಡಬಹುದು ಎಂಬುದು ಕುತೂಹಲದ ವಿಚಾರವಾಗಿದೆ ಎಂದು ಅಶ್ವಿನ್ ಹೇಳಿದ್ದಾರೆ.