Publish Date: Thu, 18 Mar 2021 (08:59 IST)
Updated Date: Thu, 18 Mar 2021 (09:01 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯ ಇಂದು ನಡೆಯಲಿದ್ದು, ಗೆಲುವಿನ ಒತ್ತಡದಲ್ಲಿರುವ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಬಹುದಾಗಿದೆ.
ಸರಣಿಯುದ್ದಕ್ಕೂ ಭಾರತ ಬ್ಯಾಟಿಂಗ್ ವೈಫಲ್ಯಕ್ಕೊಳಗಾಗಿತ್ತು. ಎರಡನೇ ಪಂದ್ಯವನ್ನು ಗೆದ್ದರೂ ಆರಂಭಿಕರು ಉತ್ತಮ ಆರಂಭ ಸಿಕ್ಕಿರಲಿಲ್ಲ. ಎಲ್ಲಾ ಪಂದ್ಯಗಳಲ್ಲೂ ಹೊಸ ಆರಂಭಿಕ ಜೋಡಿಯೊಂದಿಗೆ ಭಾರತ ಕಣಕ್ಕಿಳಿದಿತ್ತು. ಕೆಎಲ್ ರಾಹುಲ್ ಸತತ ವೈಫಲ್ಯ ಕಂಡರೂ ಅವರಿಗೆ ಮತ್ತೊಂದು ಅವಕಾಶ ಸಿಗುವ ಸಾಧ‍್ಯತೆಯಿದೆ.
ಸೂರ್ಯಕುಮಾರ್ ಯಾದವ್ ಎರಡನೇ ಪಂದ್ಯವಾಡಿದರೂ ಅವರಿಗೆ ಬ್ಯಾಟಿಂಗ್ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಅವರನ್ನು ಈ ಪಂದ್ಯದಲ್ಲಿ ಮತ್ತೆ ಆಡಿಸಿದರೂ ಅಚ್ಚರಿಯಿಲ್ಲ. ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಸಾಧ‍್ಯತೆ ಕಡಿಮೆ.