ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೂರು ತಿಂಗಳ ಬಳಿಕ ಕೊನೆಗೂ ಮೌನ ಮುರಿದ ವಿರಾಟ್ ಕೊಹ್ಲಿ

Sampriya
ಬುಧವಾರ, 3 ಸೆಪ್ಟಂಬರ್ 2025 (14:13 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಯ ವೇಳೆ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ದುರಂತದ ಬಗ್ಗೆ ಆರ್‌ಸಿಬಿ ತಂಡದ ತಾರೆ ವಿರಾಟ್ ಕೊಹ್ಲಿ ಮೂರು ತಿಂಗಳ ಬಳಿಕ ಮೌನ ಮುರಿದಿದ್ದಾರೆ.

ಐಪಿಎಲ್‌ ಟೂರ್ನಿಯಲ್ಲಿ ಚೊಚ್ಚಲ ಟ್ರೋಫಿ ಗೆದ್ದ ಆರ್‌ಸಿಬಿ ತಂಡದ ಸಂಭ್ರಮಾಚರಣೆಯ ವೇಳೆ ಉಂಟಾದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟರೆ, ಹಲವು ಮಂದಿ ಗಾಯಗೊಂಡಿದ್ದರು. ಈ ಬಗ್ಗೆ ಕೊಹ್ಲಿ ಭಾವುಕ ಸಂದೇಶವನ್ನು ಹಂಚಿದ್ದಾರೆ.

ಕಾಲ್ತುಳಿತದ ದುರಂತ ಬಳಿಕ ಕೊಹ್ಲಿ ಅವರಿಂದ ದಾಖಲಾದ ಮೊದಲ ವಿಸ್ತೃತ ಹೇಳಿಕೆ ಇದಾಗಿದೆ. ಕೊಹ್ಲಿ ಪ್ರತಿಕ್ರಿಯೆ ನೀಡದಿರುವ ಬಗ್ಗೆ ವ್ಯಾಪಕ ಟೀಕೆಗಳು ಬಂದಿದ್ದವು. ಮೂರು ತಿಂಗಳ ಬಳಿಕ ಹೇಳಿಕೆ ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4ರಂದು ಕಾಲ್ತುಳಿತ ಪ್ರಕರಣ ನಡೆದಿತ್ತು. ಆರ್‌ಸಿಬಿ ವಿಜಯೋತ್ಸವ ಆಚರಿಸಲು ಪ್ರದೇಶದಲ್ಲಿ ಲಕ್ಷಾಂತರ ಮಂದಿ ಸೇರಿದ್ದರು. 

ಈ ಸಂಬಂಧ ಕೊಹ್ಲಿ ಸಂದೇಶವನ್ನು ಆರ್‌ಸಿಬಿ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದೆ. ಸಂತೋಷದಾಯಕ ಕ್ಷಣವು ದುರಂತವಾಗಿ ಬದಲಾಯಿತು ಎಂದು ಕೊಹ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. 

ಅಂದು ನಡೆದ ಹೃದಯ ವಿದ್ರಾವಕ ಘಟನೆಗೆ ಬದುಕು ನಿಜವಾಗಿಯೂ ನಿಮ್ಮನ್ನು ಸಿದ್ಧಪಡಿಸಿರುವುದಿಲ್ಲ. ಯಾವ ಕ್ಷಣ ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿಯೇ ಅತ್ಯಂತ ಸಂತೋಷದಾಯಕವಾಗಿರಬೇಕಿತ್ತೋ ಅದು ದುರಂತಮಯವಾಗಿ ಪರಿಣಮಿಸಿತ್ತು ಎಂದು ಕೊಹ್ಲಿ ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮೊದಲ ಮದುವೆಯ ವರ್ಷದೊಳಗೆ ಎರಡನೇ ಮದುವೆಯಾದ ಅಫ್ಘಾನ್ ಕ್ರಿಕೆಟರ್ ರಶೀದ್ ಖಾನ್‌

ಆರ್‌ಸಿಬಿ ಅಭಿಮಾನಿಗಳಿಗೆ ಶಾಕ್‌ : ಚಿನ್ನಸ್ವಾಮಿಯಿಂದಲೇ ಪಂದ್ಯಗಳು ಶಿಫ್ಟ್‌ ಸಾಧ್ಯತೆ

ಮುಂದಿನ ಸುದ್ದಿ
Show comments