Select Your Language

Notifications

webdunia
webdunia
webdunia
webdunia

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಕೈಸೇರಿದ ತನಿಖಾ ವರದಿ, ಯಾರಿಗೆ ಕಾದಿದೆ ತಲೆದಂಡ

Chinnaswamy trampling case

Sampriya

ಬೆಂಗಳೂರು , ಶುಕ್ರವಾರ, 11 ಜುಲೈ 2025 (21:46 IST)
Photo Credit X
ಬೆಂಗಳೂರು: ಕಳೆದ ತಿಂಗಳು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಕೆಲ್ ಡಿ ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗ ರಚಿಸಿದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

ಐಪಿಎಲ್‌ ಟ್ರೋಪಿ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಗೆ ಏಕ ಸದಸ್ಯ ಆಯೋಗ ರಚನೆ ಮಾಡಲಾಗಿತ್ತು. 

ಮೈಕೆಲ್ ಡಿ ಕುನ್ಹಾ ಅವರು ಸಿದ್ದರಾಮಯ್ಯ ಅವರಿಗೆ ವರದಿ ಕೊಟ್ಟಿದ್ದಾರೆ. ವರದಿಯಲ್ಲಿ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‍ಗೆ ಸಮಿತಿ ಶಿಫಾರಸು ಮಾಡಿದೆ. ಹೆಚ್ಚುವರಿ ತನಿಖೆಗೂ ಸಲಹೆ ನೀಡಿದೆ. ಘಟನೆಗೆ ಪೊಲೀಸರ ವೈಫಲ್ಯವೂ ಇದೆ. ಜೊತೆಗೆ, ಕಾರ್ಯಕ್ರಮದ ಆಯೋಜಕರು ಕಾರಣಕರ್ತರು ಅಂತ ವರದಿಯಲ್ಲಿ ಹೇಳಲಾಗಿದೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.


ವರದಿಯ ಬಗ್ಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸುದ್ದಿಗಾರರೊಂದಿಗೆ ಮಾತನಾಡಿದರು. 2 ಸಂಚಿಕೆಯಲ್ಲಿ ವರದಿ ಕೊಟ್ಟಿದ್ದಾರೆ. ನನಗೆ ಪೂರ್ಣ ವರದಿ ಓದಲು ಆಗಿಲ್ಲ. ವರದಿಯಲ್ಲಿ ಏನಿದೆ ಎಂದು ನೋಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.  ಹೀಗಾಗಿ, ಯಾರಿಗೆ ತಲೆದಂಡ ಕಾದಿದೆ ಎಂಬುದು ಕುತೂಹಲ ಕೆರಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ENG vs IND Test: ಜಸ್‌ಪ್ರೀತ್ ಬೂಮ್ರಾ ದಾಳಿಗೆ ಇಂಗ್ಲೆಂಡ್ ತತ್ತರ, 387ಕ್ಕೆ ಆಲೌಟ್‌