Select Your Language

Notifications

webdunia
webdunia
webdunia
webdunia

ಭಾರತೀಯ ಕ್ರಿಕೆಟಿಗರ ವಿರುದ್ಧ ಜನಾಂಗೀಯ ನಿಂದನೆ ಮಾಡುತ್ತಿರುವ ಆಸಿಸ್ ಅಭಿಮಾನಿಗಳಿಗೆ ತಕ್ಕ ಶಾಸ್ತಿ

ಭಾರತೀಯ ಕ್ರಿಕೆಟಿಗರ ವಿರುದ್ಧ ಜನಾಂಗೀಯ ನಿಂದನೆ ಮಾಡುತ್ತಿರುವ ಆಸಿಸ್ ಅಭಿಮಾನಿಗಳಿಗೆ ತಕ್ಕ ಶಾಸ್ತಿ
ಮೆಲ್ಬೋರ್ನ್ , ಶನಿವಾರ, 29 ಡಿಸೆಂಬರ್ 2018 (09:32 IST)
ಮೆಲ್ಬೋರ್ನ್: ಆಸ್ಟ್ರೇಲಿಯಾ ಮತ್ತು ಭಾರತ ನಡುವೆ ಮೆಲ್ಬೋರ್ನ್ ಮೈದಾನದಲ್ಲಿ ನಡೆಯುತ್ತಿರುವ ತೃತೀಯ ಟೆಸ್ಟ್ ಪಂದ್ಯದಲ್ಲಿ ಅತಿಥೇಯ ತಂಡದ ಅಭಿಮಾನಿಗಳ ವರ್ತನೆ ಮಿತಿ ಮೀರಿದೆ.


ಭಾರತೀಯ ಆಟಗಾರರ ವಿರುದ್ಧ ಜನಾಂಗೀಯ ನಿಂದನೆ ಮಾಡುವಂತೆ ಮೂದಲಿಸುವುದು, ಹೀಯಾಳಿಸುವುದು ಮಾಡುತ್ತಿರುವ ಬಗ್ಗೆ ವರದಿಗಳು ಬಂದಿವೆ. ಈ ಹಿನ್ನಲೆಯಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ಮೆಲ್ಬೋರ್ನ್ ಪ್ರೇಕ್ಷಕರಿಗೆ ಎಚ್ಚರಿಕೆ ನೀಡಿದೆ.

ಮೊದಲ ಎರಡು ದಿನ ಭಾರತೀಯ ಕ್ರಿಕೆಟಿಗರು ಮತ್ತು ಅಭಿಮಾನಿಗಳ ವಿರುದ್ಧ ಆಸ್ಟ್ರೇಲಿಯಾ ಅಭಿಮಾನಿಗಳು ಜನಾಂಗೀಯ ನಿಂದನೆ ಮಾಡಿರುವ ವಿಡಿಯೋ ಸಾಕ್ಷ್ಯಗಳು ಈಗಾಗಲೇ ಕ್ರಿಕೆಟ್ ಆಸ್ಟ್ರೇಲಿಯಾ ಕೈ ಸೇರಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಭದ್ರತಾ ಅಧಿಕಾರಿಗಳು ಮತ್ತು ವಿಕ್ಟೋರಿಯಾ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಹೀಗಾಗಿ ಅಭಿಮಾನಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

7 ರ ಆಸ್ಟ್ರೇಲಿಯಾ ಬಾಲಕನಿಗೆ ಕೊಹ್ಲಿಯನ್ನು ಒಮ್ಮೆ ಔಟ್ ಮಾಡುವ ಆಸೆ