Select Your Language

Notifications

webdunia
webdunia
webdunia
webdunia

ಬಿಜೆಪಿ ಸೇರಿಕೊಂಡ ಕ್ರಿಕೆಟಿಗ ರವೀಂದ್ರ ಜಡೇಜಾ

Ravindra Jadeja

Krishnaveni K

ಮುಂಬೈ , ಶುಕ್ರವಾರ, 6 ಸೆಪ್ಟಂಬರ್ 2024 (10:22 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ಈಗ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರಿಕೊಂಡಿದ್ದಾರೆ. ಜಡೇಜಾ ಪತ್ನಿ ರಿವಾಬ ಈಗಾಗಲೇ ಬಿಜೆಪಿ ಸೇರಿಕೊಂಡು ಶಾಸಕಿಯೂ ಆಗಿದ್ದಾರೆ.

ಬಿಜೆಪಿ ಈಗ ರಾಷ್ಟ್ರಾದ್ಯಂತ ಸದಸ್ಯತ್ವ ಅಭಿಯಾನ ನಡೆಸುತ್ತಿದೆ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಅನೇಕರು ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದಾರೆ. ಅದರಂತೆ ಈಗ ಕ್ರಿಕೆಟಿಗ ರವೀಂದ್ರ ಜಡೇಜಾ ಕೂಡಾ ಬಿಜೆಪಿ ಸದಸ್ಯತ್ವ ಪಡೆದುಕೊಂಡು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಈ ವಿಚಾರವನ್ನು ಅವರ ಪತ್ನಿ ರಿವಾಬ ಜಡೇಜಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗುಜರಾತ್ ನ ಜಾಮ್ನಾ ನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇದೀಗ ಪತ್ನಿ ಜೊತೆ ಪತಿ ಕೂಡಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ರವೀಂದ್ರ ಜಡೇಜಾ ಬಿಜೆಪಿ ಸದಸ್ಯತ್ವ ಕಾರ್ಡ್ ನ್ನು ರಿವಾಬ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪತ್ನಿ ಜೊತೆ ಈಗಾಗಲೇ ಕೆಲವು ಬಾರಿ ಜಡೇಜಾ ಪ್ರಧಾನಿ ಮೋದಿಯವರನ್ನು ನೇರವಾಗಿ ಭೇಟಿಯಾಗಿದ್ದರು. ರಾಮ ಜನ್ಮಭೂಮಿಯಲ್ಲಿ ರಾಮಮಂದಿರ ಲೋಕಾರ್ಪಣೆ ಸಂದರ್ಭದಲ್ಲಿಯೂ ಹಾಜರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಕ್ಕಳಿಗಾಗಿ ಲಂಡನ್ ಗೆ ಹೋಗಿ ವಿರಾಟ್ ಕೊಹ್ಲಿ ದಂಪತಿ ಮಾಡ್ತಿರೋದು ಏನು