Publish Date: Thu, 30 Oct 2025 (14:14 IST)
Updated Date: Thu, 30 Oct 2025 (18:16 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ವೇಳೆ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಭಾರತ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಅವರು ಘಟನೆ ಕುರಿತು ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ.
ಕ್ಯಾಚ್ ಹಿಡಿಯುವ ವೇಳೆ ಗಾಯಗೊಂಡು ಆಂತರಿಕ ರಕ್ತಸ್ರಾವದಿಂದಾಗ ಸಿಡ್ನಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಅಯ್ಯರ್ ಎಕ್ಸ್ ಪೋಸ್ಟ್ ಮೂಲಕ ತಮ್ಮ ಆರೋಗ್ಯದ ಮಾಹಿತಿ ನೀಡಿದ್ದಾರೆ.
ಪ್ರಸ್ತುತ ನಾನು ಚೇತರಿಕೆಯ ಪ್ರಕ್ರಿಯೆಯಲ್ಲಿದ್ದೇನೆ. ದಿನ ಕಳೆದಂತೆ ಸುಧಾರಿಸಿಕೊಳ್ಳುತ್ತಿದ್ದೇನೆ. ನನಗೆ ಶುಭಾಶಯ ತಿಳಿಸಿದವರಿಗೆ ಮತ್ತು ಬೆಂಬಲ ನೀಡಿದವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ನನ್ನನ್ನು ನಿಮ್ಮ ಆಲೋಚನೆಗಳಲ್ಲಿ ಇರಿಸಿಕೊಂಡಿದ್ದಕ್ಕಾಗಿ ಧನ್ಯವಾದಗಳು ಎಂದು ಅವರು ಬರೆದುಕೊಂಡಿದ್ದಾರೆ.
ಶನಿವಾರ ನಡೆದಿದ್ದ ಮೂರನೇ ಏಕದಿನ ಪಂದ್ಯದಲ್ಲಿ ಅಲೆಕ್ಸ್ ಕ್ಯಾರಿ ಹೊಡೆದ ಚೆಂಡನ್ನು ಹಿಂದಕ್ಕೆ ಓಡಿ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ಅದ್ಭುತವಾಗಿ ಕ್ಯಾಚ್ ಪಡೆದು ಔಟ್ ಮಾಡಿದ್ದರು. ಆ ಸಂದರ್ಭದಲ್ಲಿ ಅಯ್ಯರ್ ಅವರ ಪಕ್ಕೆಲುಬು ಗಾಯಕ್ಕೆ ಒಳಗಾಗಿದ್ದರು. ಬಳಿಕ ಅವರನ್ನು ಸಿಡ್ನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು.
ಈ ಪಂದ್ಯವನ್ನು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಆಟದ ನೆರವಿನಿಂದ ಭಾರತ ಒಂಬತ್ತು ವಿಕೆಟ್‌ಗಳಿಂದ ಗೆದ್ದಿತ್ತು. ಆದರೆ, ಸರಣಿಯನ್ನು 1–2ರಿಂದ ಭಾರತ ಸೋತಿತ್ತು.