ಕೋಮಾದಿಂದ ಚೇತರಿಸಿಕೊಂಡ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅಭಿಮಾನಿಗಳಿಗೆ ಮೊದಲ ಸಂದೇಶ

Sampriya
ಗುರುವಾರ, 30 ಅಕ್ಟೋಬರ್ 2025 (14:14 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ವೇಳೆ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಭಾರತ ತಂಡದ ಉಪನಾಯಕ ಶ್ರೇಯಸ್‌ ಅಯ್ಯರ್‌ ಅವರು ಘಟನೆ ಕುರಿತು ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ.

ಕ್ಯಾಚ್‌ ಹಿಡಿಯುವ ವೇಳೆ ಗಾಯಗೊಂಡು ಆಂತರಿಕ ರಕ್ತಸ್ರಾವದಿಂದಾಗ ಸಿಡ್ನಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಅಯ್ಯರ್ ಎಕ್ಸ್ ಪೋಸ್ಟ್ ಮೂಲಕ ತಮ್ಮ ಆರೋಗ್ಯದ ಮಾಹಿತಿ ನೀಡಿದ್ದಾರೆ.

ಪ್ರಸ್ತುತ ನಾನು ಚೇತರಿಕೆಯ ಪ್ರಕ್ರಿಯೆಯಲ್ಲಿದ್ದೇನೆ. ದಿನ ಕಳೆದಂತೆ ಸುಧಾರಿಸಿಕೊಳ್ಳುತ್ತಿದ್ದೇನೆ. ನನಗೆ ಶುಭಾಶಯ ತಿಳಿಸಿದವರಿಗೆ ಮತ್ತು ಬೆಂಬಲ ನೀಡಿದವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ನನ್ನನ್ನು ನಿಮ್ಮ ಆಲೋಚನೆಗಳಲ್ಲಿ ಇರಿಸಿಕೊಂಡಿದ್ದಕ್ಕಾಗಿ ಧನ್ಯವಾದಗಳು ಎಂದು ಅವರು ಬರೆದುಕೊಂಡಿದ್ದಾರೆ.

ಶನಿವಾರ ನಡೆದಿದ್ದ ಮೂರನೇ ಏಕದಿನ ಪಂದ್ಯದಲ್ಲಿ ಅಲೆಕ್ಸ್‌ ಕ್ಯಾರಿ ಹೊಡೆದ ಚೆಂಡನ್ನು ಹಿಂದಕ್ಕೆ ಓಡಿ ಬ್ಯಾಕ್‌ವರ್ಡ್‌ ಪಾಯಿಂಟ್‌ನಲ್ಲಿ ಅದ್ಭುತವಾಗಿ ಕ್ಯಾಚ್ ಪಡೆದು ಔಟ್ ಮಾಡಿದ್ದರು. ಆ ಸಂದರ್ಭದಲ್ಲಿ ಅಯ್ಯರ್ ಅವರ ಪಕ್ಕೆಲುಬು ಗಾಯಕ್ಕೆ ಒಳಗಾಗಿದ್ದರು. ಬಳಿಕ ಅವರನ್ನು ಸಿಡ್ನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು. 

ಈ ಪಂದ್ಯವನ್ನು ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿ ಅವರ ಆಟದ ನೆರವಿನಿಂದ ಭಾರತ ಒಂಬತ್ತು ವಿಕೆಟ್‌ಗಳಿಂದ ಗೆದ್ದಿತ್ತು. ಆದರೆ, ಸರಣಿಯನ್ನು 1–2ರಿಂದ ಭಾರತ ಸೋತಿತ್ತು. <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟಿಕೆಟ್ ಎಲ್ಲಿ ಹೋಯ್ತು.. ಮಹಿಳಾ ವಿಶ್ವಕಪ್ ಫೈನಲ್ ಗೆ ಮುನ್ನ ಅಭಿಮಾನಿಗಳಿಂದ ಭಾರೀ ಆಕ್ರೋಶ

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಆಸ್ಟ್ರೇಲಿಯಾಕ್ಕೆ ಶನಿ ದೆಸೆ ಶುರುವಾಗಿದ್ದು ಇಲ್ಲಿಂದಲೇ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments