ಮುಂಬೈ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಪತ್ನಿ ಆಂಡ್ರಿಯಾ ತನ್ನ ಜತೆಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಕಪಾಳ ಮೋಕ್ಷ ಮಾಡಿದ ಘಟನೆ ವರದಿಯಾಗಿದೆ.
ಮುಂಬೈನ ಮಾಲ್ ಒಂದರಲ್ಲಿ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಪತ್ನಿ ಜತೆಗಿದ್ದ ಕಾಂಬ್ಳಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ಜತೆ ವಾಗ್ವಾದ ನಡೆಸಿದ್ದಲ್ಲದೆ, ನಂತರ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.
ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ಬಾಲಿವುಡ್ ಗಾಯಕ ಅಂಕಿತ್ ತಿವಾರಿ ತಂದೆ ರಾಜೇಂದ್ರ ಎನ್ನಲಾಗಿದೆ. ಈತ ತನ್ನ ಜತೆಗೆ ಬೇಕೆಂದೇ ಎಲ್ಲೆಲ್ಲೋ ಮುಟ್ಟಲು ಮುಂದಾದ ಎಂದು ಆಂಡ್ರಿಯಾ ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ಸಿಟ್ಟಿಗೆದ್ದ ಆಂಡ್ರಿಯಾ ತನ್ನಲ್ಲಿದ್ದ ಬ್ಯಾಗ್ ನಿಂದ ಆತನಿಗೆ ಹೊಡೆದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.