Select Your Language

Notifications

webdunia
webdunia
webdunia
webdunia

ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೊಗಳಿದ್ದಕ್ಕೆ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಕ್ರಿಕೆಟಿಗರು

ಮನ್ ಕೀ ಬಾತ್
NewDelhi , ಮಂಗಳವಾರ, 27 ಡಿಸೆಂಬರ್ 2016 (11:03 IST)
ನವದೆಹಲಿ: ಈ ವರ್ಷದ ಕೊನೆಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂಗ್ಲೆಂಡ್ ವಿರುದ್ಧ ಗೆದ್ದ ಟೀಂ ಇಂಡಿಯಾ ಮತ್ತು ಉತ್ತಮ ಪ್ರದರ್ಶನ ನೀಡಿದ ಕ್ರಿಕೆಟಿಗರನ್ನು ಹೊಗಳಿದ್ದಕ್ಕೆ ಬಿಸಿಸಿಐ ಮತ್ತು ವಿರಾಟ್ ಕೊಹ್ಲಿ ಧನ್ಯವಾದ ಅರ್ಪಿಸಿದ್ದಾರೆ.


ಪ್ರಧಾನಿ ಮೋದಿ ತಮ್ಮ ಮನ್ ಕೀ ಬಾತ್ ರೇಡಿಯೋ ಭಾಷಣದಲ್ಲಿ ಟೀಂ ಇಂಡಿಯಾ ಸರಣಿ ಗೆದ್ದುದನ್ನು ಉಲ್ಲೇಖಿಸಿ, ಉತ್ತಮ ಪ್ರದರ್ಶನ ನೀಡಿದ ಕರುಣ್ ನಾಯರ್,  ರವಿಚಂದ್ರನ್ ಅಶ್ವಿನ್ ಗೆ ಅಭಿನಂದನೆ ಸಲ್ಲಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಸಿಸಿಐ ನಿಮ್ಮ ಅಭಿನಂದನೆಗೆ ಧನ್ಯವಾದಗಳು. ನಿಮ್ಮ ಬೆಂಬಲವೇ ನಮಗೆ ಸ್ಪೂರ್ತಿ ಎಂದು ಟ್ವೀಟ್ ಮಾಡಿದೆ. ಇದನ್ನು ನಾಯಕ ವಿರಾಟ್ ಕೊಹ್ಲಿ ಕೂಡಾ ರಿಟ್ವೀಟ್ ಮಾಡಿದ್ದಾರೆ. ಇದಲ್ಲದೆ ಕರುಣ್ ನಾಯರ್ ಕೂಡಾ ತಮ್ಮನ್ನು ಅಭಿನಂದಿಸಿದ ಪ್ರಧಾನಿಗೆ ಟ್ವಿಟರ್ ನಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾ ಗಾಯಾಳುಗಳ ಕ್ಯಾಂಪ್ ಗೆ ಹೊಸ ಸೇರ್ಪಡೆ