ಲಕ್ನೋ: ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೋಮವಾರ IPL 2025 ರ ಪಂದ್ಯ 30 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಲಕ್ನೋ ಸೂಪರ್ ಜೈಂಟ್ಸ್ ಅನ್ನು ಎದುರಿಸಲಿದೆ.
ಟಾಸ್ ಗೆದ್ದ ಎಂಎಸ್ ಧೋನಿ ಮೊದಲು ಫೀಲ್ಡಿಂಗ್ ಆಯ್ದುಕೊಂಡು, ಎಲ್‌ಎಸ್‌ಜಿಯನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಸತತ ಸೋಲಿನಿಂದ ಕಂಗೆಟ್ಟಿರುವ CSK ಇದೀಗ LSG ವಿರುದ್ಧ ಗೆಲುವಿನ ನಿರೀಕ್ಷೆಯಲ್ಲಿದೆ. ಐದು ಬಾರಿಯ ಐಪಿಎಲ್ ಚಾಂಪಿಯನ್ ಆಗಿರುವ ಸಿಎಸ್ ಕೆ ಸತತ ಐದು ಪಂದ್ಯಗಳಲ್ಲಿ ಸೋತು ಭಾರೀ ಟೀಕೆಗೆ ಒಳಗಾಗಿದೆ.
ಗಾಯದಿಂದ ರುತುರಾಜ್ ಗಾಯಕ್ವಾಡ್ ಹೊರಕ್ಕುಳಿದ ಬಳಿಕ ಸಿಎಸ್‌ಕೆ ನಾಯಕನಾಗಿ ಎಂಎಸ್ ಧೋನಿ ಜವಾಬ್ದಾರಿ ವಹಿಸಿಕೊಂಡರು. ಆದರೆ ಅವರ ಮೊದಲ ಕ್ಯಾಪ್ಟನ್ಸಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸಿಎಸ್‌ಕೆ ಹೀನಾಯ ಸೋಲು ಅನುಭವಿಸಿತು.
ಇದುವರೆಗೆ ನಡೆದ 6 ಐಪಿಎಲ್ 2025ರ ಪಂದ್ಯಾಟದಲ್ಲಿ ಸಿಎಸ್‌ಕೆ ಐದು ಹ್ಯಾಟ್ರಿಕ್ ಸೋಲು ಅನುಭವಿಸಿ, ಪಾಯಿಂಟ್ಸ್ ಟೇಬಲ್‌ನಲ್ಲಿ ಕೊನೆಯ ಸ್ಥಾನದಲ್ಲಿದೆ. ಎಲ್‌ಎಸ್‌ಜಿ ನಡೆದ 6 ಪಂದ್ಯಾಟದಲ್ಲಿ ನಾಲ್ಕರಲ್ಲಿ ಗೆಲುವು ಸಾಧಿಸಿ ಪಾಯಿಂಟ್ಸ್ ಟೇಬಲ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ.