Webdunia - Bharat's app for daily news and videos

Install App

ಭಾರತ-ಪಾಕ್ ಪಂದ್ಯಕ್ಕೆ ಮುನ್ನ ‘ಎಕ್ಸ್’ನಲ್ಲಿ ಶುರುವಾಯ್ತು ಬಾಯ್ಕಾಟ್ ಅಭಿಯಾನ

Webdunia
ಶುಕ್ರವಾರ, 13 ಅಕ್ಟೋಬರ್ 2023 (16:07 IST)
ಅಹಮ್ಮದಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ನಾಳೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಸಾಂಪ್ರದಾಯಿಕ ಎದುರಾಳಿಗಳ ಪಂದ್ಯಕ್ಕೆ ಮುನ್ನ ‘ಎಕ್ಸ್’ (ಟ್ವಿಟರ್) ನಲ್ಲಿ ಬಾಯ್ಕಾಟ್ ಬಿಸಿ ಟ್ರೆಂಡ್ ಶುರುವಾಗಿದೆ.

ಸದಾ ಭಾರತಕ್ಕೆ ಉಗ್ರರನ್ನು ಛೂ ಬಿಟ್ಟು ಕಾಟ ಕೊಡುವ ಪಾಕಿಸ್ತಾನದ ಜೊತೆಗೆ ಉಭಯ ದೇಶಗಳ ಸರಣಿ ಆಡುವುದನ್ನು ಬಿಟ್ಟು ಎಷ್ಟೋ ಸಮಯವೇ ಆಗಿದೆ. ಆದರೆ ಐಸಿಸಿ ಕೂಟಗಳಲ್ಲಿ ಎರಡೂ ತಂಡಗಳು ಎದುರಾಗುತ್ತವೆ.

ಇದೀಗ ಭಾರತದಲ್ಲೇ ನಡೆಯುತ್ತಿರುವ ಏಕದಿನ ವಿಶ್ವಕಪ್ ನಲ್ಲಿ ಉಭಯ ತಂಡಗಳು ಸೆಣಸಾಡುತ್ತಿವೆ. ಆದರೆ ಈ ಪಂದ್ಯಕ್ಕೆ ಸ್ವತಃ ಬಿಸಿಸಿಐ ವಿಶೇಷ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಿ ಭರ್ಜರಿ ಪ್ರಚಾರ ನೀಡುತ್ತಿರುವುದು ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಎಕ್ಸ್ ನಲ್ಲಿ ಬಾಯ್ಕಾಟ್ ಇಂಡೋ ಪಾಕ್ ಮ್ಯಾಚ್ ಎಂಬ ಹ್ಯಾಶ್ ಟ್ಯಾಗ್ ನಡಿ ಅಭಿಯಾನ ಆರಂಭವಾಗಿದೆ. ಭಾರತದ ವೀರ ಯೋಧರ ಪ್ರಾಣತ್ಯಾಗದ ಫೋಟೋಗಳನ್ನು ಪ್ರಕಟಿಸಿ ಬಿಸಿಸಿಐಗೆ ಪಾಕಿಸ್ತಾನದ ವಿರುದ್ಧ ಪಂದ್ಯ ಆಯೋಜಿಸುತ್ತಿರುವುದಕ್ಕೆ ನಾಚಿಕೆಯಾಗಬೇಕು ಎಂದು ಹಲವರು ಆಕ್ರೋಶ ಹೊರಹಾಕಿದ್ದಾರೆ. ನಾಳೆಯ ಪಂದ್ಯಕ್ಕೂ ಮೈದಾನದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಭದ್ರತೆ ಒದಗಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments