ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಇಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ಪಂದ್ಯ ನಡೆಯುತ್ತಿದೆ.
ಮೊದಲು ಬ್ಯಾಟಿಂಗ್ ಮಾಡಿದ ಹಾಲಿ ಚಾಂಪಿಯನ್ ಇಂಗ್ಲೆಂಡ್ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ. ಇಂಗ್ಲೆಂಡ್ 33.2 ಓವರ್ ಗಳಲ್ಲಿ 156 ರನ್ ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಮತ್ತೊಮ್ಮೆ ತನ್ನ ಬ್ಯಾಟಿಂಗ್ ಹುಳುಕು ಹೊರಹಾಕಿದೆ.
ಇಂಗ್ಲೆಂಡ್ ಪರ ಬೆನ್ ಸ್ಟೋಕ್ಸ್ 43, ಜಾನಿ ಬೇರ್ ಸ್ಟೋ 30, ಡೇವಿಡ್ ಮಲನ್ 28 ರನ್ ಗಳಿಸಿದರು. ಲಂಕಾ ಪರ ಅತ್ಯುತ್ತಮ ದಾಳಿ ಸಂಘಟಿಸಿದ ಲಹಿರು ಕುಮಾರ 3, ಕಸುನ್ ರಜಿತ ಮತ್ತು ಆಂಜಲೋ ಮ್ಯಾಥ್ಯೂಸ್ ತಲಾ 2 ವಿಕೆಟ್ ಕಬಳಿಸಿದರು. ಇದೀಗ ಲಂಕಾ ಗೆಲುವಿಗೆ ಕೇವಲ 157 ರನ್ ಗಳಿಸಿದರೆ ಸಾಕು.