Publish Date: Sun, 15 Oct 2023 (09:10 IST)
Updated Date: Sun, 15 Oct 2023 (09:25 IST)
ನವದೆಹಲಿ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನಡುವೆ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಪಂದ್ಯ ನಡೆಯಲಿದೆ.
ಇಂಗ್ಲೆಂಡ್ ಮೊದಲ ಪಂದ್ಯ ಸೋತ ನಂತರ ಕಳೆದ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಮೊದಲ ಗೆಲುವು ಕಂಡಿತ್ತು. ಕಳೆದ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟಿಗರು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ದೆಹಲಿಯ ಮೈದಾನ ಬ್ಯಾಟಿಂಗ್ ಸ್ನೇಹಿಯಾಗಿದ್ದು ಇಲ್ಲಿಯೂ ರನ್ ಹೊಳೆ ಹರಿಯುವ ನಿರೀಕ್ಷೆಯಿದೆ.
ಇತ್ತ ಅಫ್ಘಾನಿಸ್ತಾನ ಆಡಿದ ಎರಡೂ ಪಂದ್ಯಗಳನ್ನು ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಭಾರತದ ವಿರುದ್ಧ ಇದೇ ಮೈದಾನದಲ್ಲಿ ಅಫ್ಘನ್ ಬ್ಯಾಟಿಗರು ಕೊಂಚ ಸುಧಾರಿತ ಪ್ರದರ್ಶನ ನೀಡಿದ್ದರು. ಇಂದೂ ಕೂಡಾ ಅದೇ ರೀತಿ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ. ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗುವುದು.