Webdunia - Bharat's app for daily news and videos

Install App

ಏಕದಿನ ವಿಶ್ವಕಪ್ ಕ್ರಿಕೆಟ್: ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ

Webdunia
ಶನಿವಾರ, 14 ಅಕ್ಟೋಬರ್ 2023 (08:10 IST)
ಅಹಮ್ಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಫೈನಲ್ ಗಿಂತಲೂ ಹೆಚ್ಚು ಕಳೆಗಟ್ಟುವ ಪಂದ್ಯವೆಂದರೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ಪಂದ್ಯಕ್ಕೆ.

ಅದೂ ಈ ಬಾರಿ ಭಾರತದಲ್ಲೇ ವಿಶ್ವಕಪ್ ನಡೆಯುತ್ತಿರುವುದರಿಂದ ಈ ಎರಡು ಎದುರಾಳಿಗಳ ನಡುವಿನ ಕದನ ರೋಚಕತೆ ಮೇರೆ ಮೀರಿದೆ. ಅಹಮ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಈಗಾಗಲೇ ಟಿಕೆಟ್ ಸೋಲ್ಡ್ ಔಟಾಗಿದ್ದು, ವಿಶ್ವದ ಬೃಹತ್ ಕ್ರೀಡಾಂಗಣದಲ್ಲಿ ಇಂದು ಭರ್ತಿಯಾಗಲಿದೆ.

ರೋಹಿತ್ ಶರ್ಮಾ ಪಡೆ ಈಗಾಗಲೇ ಆಡಿದ ಎರಡೂ ಪಂದ್ಯಗಳಲ್ಲಿ ಅಧಿಕಾರಯುತ ಗೆಲುವು ಪಡೆದಿದೆ.  ಕಳೆದ ಪಂದ್ಯದಲ್ಲಿ ಅಗ್ರಕ್ರಮಾಂಕ ಸಿಡಿದಿದ್ದು ಭಾರತಕ್ಕೆ ನಿರಾಳವಾಗಿದೆ. ಬೌಲಿಂಗ್ ನಲ್ಲೂ ಭಾರತ ವೇಗ ಪ್ಲಸ್ ಸ್ಪಿನ್ನರ್ ಗಳ ಸಮತೋಲನ ಹೊಂದಿರುವುದರಿಂದ ಪ್ರಬಲ ತಂಡವಾಗಿದೆ.

ಆದರೆ ಪಾಕಿಸ್ತಾನ ಕೂಡಾ ಸುಲಭದ ಎದುರಾಳಿಯಲ್ಲ. ಮೊಹಮ್ಮದ್ ರಿಜ್ವಾನ್ ಫಾರ್ಮ್ ಗೆ ಮರಳಿರುವುದು ಭಾರತಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದೆ. ಇನ್ನು, ಶಾಹಿನ್ ಅಫ್ರಿದಿ, ಹ್ಯಾರಿಸ್ ರೌಫ್ ಒಳಗೊಂಡ ವೇಗದ ವಿಭಾಗ ಬಲಿಷ್ಠವಾಗಿದೆ. ಆದರೆ ಸೂಕ್ತ ಎಡಗೈ ಸ್ಪಿನ್ನರ್ ನ ಕೊರತೆ ಕಾಡಬಹುದು. ಈ ಜಿದ್ದಾಜಿದ್ದಿನ ಪಂದ್ಯ ಮಧ‍್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments