ಏಕದಿನ ವಿಶ್ವಕಪ್: ಟೀಂ ಇಂಡಿಯಾ-ದ.ಆಫ್ರಿಕಾ ನಡುವೆ ಇಂದು ‘ಮದಗಜ’ ಹೋರಾಟ

Webdunia
ಭಾನುವಾರ, 5 ನವೆಂಬರ್ 2023 (08:40 IST)
ಕೋಲ್ಕೊತ್ತಾ: ಈ ಏಕದಿನ ವಿಶ್ವಕಪ್ ನಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಎರಡು ಪ್ರಬಲ ತಂಡಗಳಾದ ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ಪಂದ್ಯ ನಡೆಯಲಿದೆ.

ಟೀಂ ಇಂಡಿಯಾ ಈಗಾಗಲೇ ಏಳಕ್ಕೆ ಏಳು ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಗೇರಿದ ಮೊದಲ ತಂಡವೆನಿಸಿಕೊಂಡಿದೆ. ಹಾಗಿದ್ದರೂ ಭಾರತದಂತೆಯೇ ಪ್ರಬಲ ತಂಡವಾಗಿರುವ ಆಫ್ರಿಕಾವನ್ನು ಸೋಲಿಸುವುದು ರೋಹಿತ್ ಪಡೆಯ ಆತ್ಮವಿಶ್ವಾಸ ಹೆಚ್ಚಿಸಲಿದೆ. ರೋಹಿತ್ ಪಡೆ ಇದುವರೆಗೆ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಮಿಂಚಿದೆ. ಅದರಲ್ಲೂ ಇಂದು ವಿರಾಟ್ ಕೊಹ್ಲಿ ಹುಟ್ಟುಹಬ್ಬದಂದು ನಡೆಯುತ್ತಿರುವ ಪಂದ್ಯ. ಹೀಗಾಗಿ ಎಲ್ಲರ ಗಮನ ಕಿಂಗ್ ಕೊಹ್ಲಿಯ ಮೇಲಿರಲಿದೆ. ಅಲ್ಲದೆ, ಸದ್ಯಕ್ಕೆ ಟೀಂ ಇಂಡಿಯಾದಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ವೇಗಿ ಮೊಹಮ್ಮದ್ ಶಮಿಗೆ ಇದು ತವರಿನ ಅಂಕಣ.

ಇತ್ತ ದ.ಆಫ್ರಿಕಾ ನೆದರ್ಲ್ಯಾಂಡ್ಸ್ ವಿರುದ್ಧ ಮುಗ್ಗರಿಸಿದ್ದು ಬಿಟ್ಟರೆ ಉಳಿದ ಆರೂ ಪಂದ್ಯಗಳನ್ನು ಗೆದ್ದುಕೊಂಡಿದೆ. ಕ್ವಿಂಟನ್ ಡಿ ಕಾಕ್ ಅದ್ಭುತ ಫಾರ್ಮ್ ನಲ್ಲಿದ್ದು ಐದನೆಯ ಶತಕದ ನಿರೀಕ್ಷೆಯಲ್ಲಿದ್ದಾರೆ. ಕಳೆದ ಪಂದ್ಯದಲ್ಲಿ ಡುಸೆನ್ ಕೂಡಾ ಶತಕ ಸಿಡಿಸಿ ಎದುರಾಳಿಗಳಿಗೆ ಎಚ್ಚರಿಕೆ ನೀಡಿದ್ದರು. ಆಫ್ರಿಕಾ ಕೂಡಾ ಬ್ಯಾಟಿಂಗ್ ನಲ್ಲಿ ಬಲಾಢ್ಯ ತಂಡವಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪ್ರಬಲ ಪೈಪೋಟಿಯಿರುವುದಂತೂ ಖಂಡಿತಾ. ಈ ಪಂದ್ಯ ಅಪರಾಹ್ನ 2 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

IND vs AUS T20: ಟೀಂ ಇಂಡಿಯಾಕ್ಕೆ ಇಂದಿನಿಂದ ಆಸ್ಟ್ರೇಲಿಯಾ ಟಿ20 ಪರೀಕ್ಷೆ

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಮುಂದಿನ ಸುದ್ದಿ
Show comments