Publish Date: Tue, 17 Oct 2023 (08:50 IST)
Updated Date: Tue, 17 Oct 2023 (08:58 IST)
ಅಹಮ್ಮದಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಮುಂದಿನ ಪಂದ್ಯಕ್ಕೆ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡುವ ಸಾಧ‍್ಯತೆಯಿದೆ.
ಕಳೆದ ಎರಡು ಪಂದ್ಯಗಳಲ್ಲಿ ವೇಗಿ ಶಾರ್ದೂಲ್ ಠಾಕೂರ್ ಗೆ ಅವಕಾಶ ನೀಡಲಾಗಿತ್ತು. ಆದರೆ ಎರಡೂ ಪಂದ್ಯಗಳಲ್ಲಿ ಅವರು ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ಜೊತೆಗೆ ಅವರಿಗೆ ಬ್ಯಾಟಿಂಗ್ ಅವಕಾಶವೂ ಸಿಕ್ಕಿರಲಿಲ್ಲ. ಹೀಗಾಗಿ ಅವರ ಆಯ್ಕೆ ಬಗ್ಗೆ ಟೀಕೆ ಕೇಳಿಬಂದಿದೆ.
ಇದರ ಬೆನ್ನಲ್ಲೇ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಒಂದೇ ಒಂದು ಅವಕಾಶ ನೀಡಲಾಗಿಲ್ಲ. ಹೀಗಾಗಿ ಅಕ್ಟೋಬರ್ 19 ರಂದು ನಡೆಯಲಿರುವ ಬಾಂಗ್ಲಾದೇಶದ ವಿರುದ್ಧದ ಪಂದ್ಯಕ್ಕೆ ಶಮಿಗೆ ಅವಕಾಶ ಸಿಗುವ ಸಾಧ‍್ಯತೆಯಿದೆ.