ಧರ್ಮಶಾಲಾ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಮುಂದಿನ ಪಂದ್ಯವನ್ನು ನ್ಯೂಜಿಲೆಂಡ್ ವಿರುದ್ಧ ಆಡಲಿದೆ.
ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ ಗಳಿಸಿದ ಬಳಿಕ ಟೀಂ ಇಂಡಿಯಾ ಇಂದು ಧರ್ಮಶಾಲಾಗೆ ಬಂದಿಳಿದಿದೆ. ಅಕ್ಟೋಬರ್ 22 ರಂದು ಈ ಪಂದ್ಯ ನಡೆಯಲಿದೆ.
ಆದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ಉಪನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿಯಲಿದ್ದಾರೆ. ಕಳೆದ ಪಂದ್ಯದಲ್ಲಿ ಹಾರ್ದಿಕ್ ಬೌಲಿಂಗ್ ಮಾಡುವಾಗ ಗಾಯಗೊಂಡಿದ್ದರು. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರು ತಂಡಕ್ಕೆ ಅಲಭ್ಯರಾಗಲಿದ್ದಾರೆ.