ಏಕದಿನ ವಿಶ್ವಕಪ್ ಕೂಟದಲ್ಲಿಂದು ಎರಡು ಮಹತ್ವದ ಪಂದ್ಯ

Webdunia
ಶನಿವಾರ, 28 ಅಕ್ಟೋಬರ್ 2023 (09:00 IST)
ಧರ್ಮಶಾಲಾ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಎರಡು ಮಹತ್ವದ ಪಂದ್ಯಗಳು ನಡೆಯಲಿವೆ. ಧರ್ಮಶಾಲಾದಲ್ಲಿ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ನಡುವೆ ಮತ್ತು ಕೋಲ್ಕೊತ್ತಾದಲ್ಲಿ ಬಾಂಗ್ಲಾ-ನೆದರ್ಲ್ಯಾಂಡ್ಸ್ ನಡುವೆ ಪಂದ್ಯ ನಡೆಯಲಿದೆ.

ಆಸ್ಟ್ರೇಲಿಯಾಗೆ ಈಗ ಸೆಮಿಫೈನಲ್ ಹಾದಿಯನ್ನು ಜೀವಂತವಾಗಿರಿಸಲು ಇಂದಿನ ಪಂದ್ಯವನ್ನು ಗೆಲ್ಲಲೇಬೇಕಿದೆ. ಅತ್ತ ಸೋಲಿಲ್ಲದೇ ಮೆರೆಯುತ್ತಿದ್ದ ನ್ಯೂಜಿಲೆಂಡ್ ಕಳೆದ ಪಂದ್ಯದಲ್ಲಿ ಇದೇ ಮೈದಾನದಲ್ಲಿ ಟೀಂ ಇಂಡಿಯಾ ವಿರುದ್ಧ ಕಂಡ ಸೋಲನ್ನು ಮರೆತು ಅಗ್ರ ಸ್ಥಾನಕ್ಕಾಗಿ ಪೈಪೋಟಿ ನಡೆಸಲಿದೆ. ಈ ಪಂದ್ಯ ಬೆಳಿಗ್ಗೆ 10.30 ಕ್ಕೆ ಆರಂಭವಾಗಲಿದೆ.

ಇನ್ನೊಂದು ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ನೆದರ್ಲ್ಯಾಂಡ್ಸ್ ನಡುವೆ ಸಮಬಲದ ಕಾದಾಟ ನಡೆಯಲಿದೆ. ನೆದರ್ಲ್ಯಾಂಡ್ಸ್ ಈ ಕೂಟದಲ್ಲಿ ಅಲ್ಪಮಟ್ಟಿನ ಪ್ರತಿರೋಧ ತೋರುವಲ್ಲಿ ಯಶಸ್ವಿಯಾಗಿದೆ. ಆದರೆ ಬಾಂಗ್ಲಾದೇಶ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ವಿಫಲವಾಗಿದೆ. ಹೆಚ್ಚು ಕಡಿಮೆ ಎರಡೂ ತಂಡಕ್ಕೆ ಮುಂದಿನ ಹಾದಿ ಕಷ್ಟವೇ. ಆದರೆ ಪ್ರತಿಷ್ಠೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಗೆಲುವು ಅನಿವಾರ್ಯ. ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ: ಮೊದಲ ಪಂದ್ಯ ಗೆದ್ದಿರುವ ಭಾರತ ತಂಡದಲ್ಲಿ ಇಂದು ಎರಡು ಬದಲಾವಣೆ

ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾದೇಶಕ್ಕೆ ತಕ್ಕ ಪಾಠ ಕಲಿಸಿದ ಐಸಿಸಿ

IPL 2026: ಆರ್ ಸಿಬಿ ಬೆಂಗಳೂರಿನಲ್ಲಿ ಆಡಲು ಹಿಂದೇಟು ಹಾಕುತ್ತಿರುವುದು ಇದೇ ಕಾರಣಕ್ಕೆ

IND vs NZ: ಟೀಂ ಇಂಡಿಯಾ, ನ್ಯೂಜಿಲೆಂಡ್ ಎರಡನೇ ಟಿ20 ಇಂದು, ಎಷ್ಟು ಗಂಟೆಗೆ ಆರಂಭ ನೋಡಿ

ಆರ್ ಸಿಬಿಗೆ ಒಡತಿಯಾಗಲು ಹೊರಟ ಅನುಷ್ಕಾ ಶರ್ಮಾ

ಮುಂದಿನ ಸುದ್ದಿ
Show comments