ಎಬಿ ಡಿವಿಲಿಯರ್ಸ್ ಕ್ಯಾರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ತಮ್ಮ ಬ್ಯಾಟಿಂಗ್ ಕೌಶಲ್ಯವನ್ನು ಮುಂದುವರಿಸಿದ್ದು, 54 ಎಸೆತಗಳಲ್ಲಿ 84 ರನ್ ಸಿಡಿಸಿ ಬಾರ್ಬಡೋಸ್ ಟ್ರೈಡೆಂಟ್ಸ್ ತಂಡವು ಸೇಂಟ್ ಕಿಟ್ಸ್ ಮತ್ತು ನೆವಿಸ್ ಪ್ಯಾಟ್ರಿಯಟ್ಸ್ ತಂಡದ ವಿರುದ್ಧ 25 ರನ್ ಜಯಗಳಿಸಿದೆ.
ದಕ್ಷಿಣ ಆಫ್ರಿಕಾ ಆಟಗಾರನ ಮೂರು ಪಂದ್ಯಗಳಲ್ಲಿ ಎರಡನೇ ಅರ್ಧಶತಕ ಬಲದಿಂದ ಅವರ ಫ್ರಾಂಚೈಸಿ ಬಾರ್ಬಡೋಸ್ ಟ್ರೈಡೆಂಟ್ಸ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿಯಲು ನೆರವಾಗಿದೆ.
ಬಲಗೈ ಆಟಗಾರನ ಸ್ಕೋರಿನಲ್ಲಿ 9 ಬೌಂಡರಿಗಳು ಮತ್ತು ಮೂರು ಸಿಕ್ಸರ್‌ಗಳಿದ್ದವು. ಅವರ ಮನೋಜ್ಞ ಆಟಕ್ಕಾಗಿ ಪಂದ್ಯ ಶ್ರೇಷ್ಟ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ.