Publish Date: Mon, 21 Feb 2022 (11:26 IST)
Updated Date: Mon, 21 Feb 2022 (15:30 IST)
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯವನ್ನು ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿರುವ ಖುಷಿಯಲ್ಲಿರುವ ಟೀಂ ಇಂಡಿಯಾಗೆ ದೀಪಕ್ ಚಹರ್ ರೂಪದಲ್ಲಿ ಆಘಾತ ಸಿಕ್ಕಿದೆ.
ದೀಪಕ್ ಮಂಡಿ ನೋವಿಗೊಳಗಾಗಿದ್ದು, ಲಂಕಾ ಸರಣಿಯಲ್ಲಿ ಪಾಲ್ಗೊಳ್ಳುವುದು ಅನುಮಾನವಾಗಿದೆ. ವಿಂಡೀಸ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ದೀಪಕ್ ಚಹರ್ ಈ ಹಿಂದೆ ಶ್ರೀಲಂಕಾ ಪ್ರವಾಸ ವೇಳೆಯೂ ಉತ್ತಮ ಪ್ರದರ್ಶನ ನೀಡಿದ್ದರು.
ಇದೀಗ ಲಂಕಾ ಸರಣಿಗೆ ಈ ಆಲ್ ರೌಂಡರ್ ಅನುಪಸ್ಥಿತಿಗೆ ಕಾಡಲಿದೆ. ಅತ್ತ ರಿಷಬ್ ಪಂತ್, ವಿರಾಟ್ ಕೊಹ್ಲಿ ಕೂಡಾ ಗೈರಾಗಿರುವುದು ಟೀಂ ಇಂಡಿಯಾಗೆ ದೊಡ್ಡ ಹೊಡೆತ ನೀಡಲಿದೆ.