ಪಿಚ್ ಗೆ ನುಗ್ಗಿದ ಅಭಿಮಾನಿ ಜೊತೆ ಧೋನಿ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ

Krishnaveni K
ಶನಿವಾರ, 11 ಮೇ 2024 (12:28 IST)
Photo Courtesy: Twitter
ಅಹಮ್ಮದಾಬಾದ್: ಐಪಿಎಲ್ 2024 ರಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸಿಎಸ್ ಕೆ ಪಂದ್ಯ ನಡೆಯುತ್ತಿದ್ದಾಗ ಅಭಿಮಾನಿಯೊಬ್ಬ ಧೋನಿಯನ್ನು ನೋಡಲೆಂದು ಪಿಚ್ ಗೆ ನುಗ್ಗಿದ್ದಾನೆ. ಈತನ ಜೊತೆಗೆ ಧೋನಿ ನಡೆದುಕೊಂಡ ರೀತಿ ಈಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ವಿರಾಟ್ ಕೊಹ್ಲಿ, ಧೋನಿ, ರೋಹಿತ್ ಶರ್ಮಾರಂತಹ ದಿಗ್ಗಜ ಆಟಗಾರರು ಮೈದಾನದಲ್ಲಿದ್ದಾಗ ಅಭಿಮಾನಿಗಳು ಅವರನ್ನು ಭೇಟಿ ಮಾಡಲು ಮೈದಾನಕ್ಕೆ ನುಗ್ಗಿದ ಎಷ್ಟೋ ಉದಾಹರಣೆಗಳಿವೆ. ಈ ಐಪಿಎಲ್ ನಲ್ಲೇ ಇಂತಹ ಘಟನೆಗಳಾಗಿವೆ. ಇದೀಗ ಧೋನಿಯನ್ನು ನೋಡಲು ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ್ದಾನೆ.

ಅಹಮ್ಮದಾಬಾದ್ ಮೈದಾನದಲ್ಲಿ ಧೋನಿ ಬ್ಯಾಟಿಂಗ್ ಮಾಡುತ್ತಿದ್ದಾಗ ಅಭಿಮಾನಿಯೊಬ್ಬ ಸೀದಾ ಪಿಚ್ ಗೆ ನುಗ್ಗಿ ಧೋನಿಯ ಕಾಲು ಹಿಡಿದು ನಮಸ್ಕರಿಸಿದ್ದಾನೆ. ಮೊದಲು ಧೋನಿ ಆತನಿಂದ ತಪ್ಪಿಸಿಕೊಳ್ಳುವಂತೆ ಓಡುವ ನಾಟಕವಾಡಿದ್ದಾರೆ. ಬಳಿಕ ಆತನ ಹೆಗಲಿಗೆ ಕೈ ಹಾಕಿ ತಿಳಿ ಹೇಳಿದ್ದಾರೆ. ಈ ವೇಳೆ ಭದ್ರತಾ ಪಡೆ ಸಿಬ್ಬಂದಿಗಳು ಮೈದಾನಕ್ಕೆ ಬಂದು ಆತನನ್ನು ಹಿಡಿದುಕೊಂಡಿದ್ದಾರೆ. ಈ ವೇಳೆ ಸಿಬ್ಬಂದಿಗಳಿಗೂ ಆತನಿಗೆ ಏನೂ ಮಾಡದಂತೆ ಮನವಿ ಮಾಡಿದ್ದಾರೆ.

ಧೋನಿಯ ಈ ವರ್ತನೆ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಧೋನಿ ಕೇವಲ ಆಟಗಾರನಲ್ಲ, ಎಷ್ಟೋ ಅಭಿಮಾನಿಗಳ ಆರಾಧ್ಯ ದೈವ. ಅದಕ್ಕೇ ಅಭಿಮಾನಿಗಳು ಅವರನ್ನು ಎಲ್ಲೇ ಹೋದರೂ ಈ ರೀತಿ ಮುತ್ತಿಕೊಳ್ಳುತ್ತಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಮುಂದಿನ ಸುದ್ದಿ
Show comments