Publish Date: Thu, 09 Sep 2021 (07:30 IST)
Updated Date: Thu, 09 Sep 2021 (07:31 IST)
ಮುಂಬೈ: ಮುಂಬರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಮಾಜಿ ನಾಯಕ ಎಂ.ಎಸ್. ಧೋನಿ ತಂಡಕ್ಕೆ ವಾಪಸಾಗಿದ್ದಾರೆ.
ಆದರೆ ಧೋನಿ ಈ ಬಾರಿ ಆಟಗಾರನಾಗಿ ಅಲ್ಲ, ಮೆಂಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಕೋಚ್ ರವಿಶಾಸ್ತ್ರಿ ಮತ್ತು ಬಳಗದೊಂದಿಗೆ ಧೋನಿ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆ ನೀಡಿದ್ದಾರೆ.
ಟೀಂ ಇಂಡಿಯಾಕ್ಕೆ ಯಜುವೇಂದ್ರ ಚಾಹಲ್ ಗೆ ಕೊಕ್ ನೀಡಿದ್ದು, ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಗೆ ಸ್ಥಾನ ನೀಡಿದೆ. ಉಳಿದಂತೆ ತಂಡ ಇಂತಿದೆ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.