Webdunia - Bharat's app for daily news and videos

Install App

Dhoni Fan Gril: ಧೋನಿ ಔಟಾಗಿದ್ದಕ್ಕೆ ಈ ಯುವತಿ ಕೊಟ್ಟ ರಿಯಾಕ್ಷನ್ ವೈರಲ್

Krishnaveni K
ಸೋಮವಾರ, 31 ಮಾರ್ಚ್ 2025 (12:06 IST)
Photo Credit: X
ಗುವಾಹಟಿ: ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲ್ಲಬಹುದಾಗಿದ್ದ ಪಂದ್ಯವನ್ನು ಸೋತ ಬಳಿಕ ಸಿಎಸ್ ಕೆ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ಅದರಲ್ಲೂ ಧೋನಿ ಔಟಾದಾಗ ಯುವತಿಯೊಬ್ಬಳು ನೀಡಿದ ರಿಯಾಕ್ಷನ್ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಜಸ್ಥಾನ್ ನೀಡಿದ್ದ 183 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ ಸಿಎಸ್ ಕೆ 20 ಓವರ್ ಗಳಲ್ಲಿ 176 ರನ್ ಗಳಿಸಲಷ್ಟೇ ಶಕ್ತವಾಗಿ ಕೇವಲ 6 ರನ್ ಗಳಿಂದ ಸೋತಿತು. ಇದಕ್ಕೆ ಕಾರಣ ಧೋನಿ ವೈಫಲ್ಯ ಎನ್ನುವುದು ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ.

19.1 ನೇ ಓವರ್ ನಲ್ಲಿ 11 ಎಸೆತಗಳಿಂದ 16 ರನ್ ಗಳಿಸಿದ್ದ ಧೋನಿ ಔಟಾದರು. ಒಂದು  ವೇಳೆ ಧೋನಿ ಕ್ರೀಸ್ ನಲ್ಲಿದ್ದಿದ್ದರೆ ಪಂದ್ಯ ಗೆಲ್ಲುತ್ತಿತ್ತು ಎಂಬುದು ಅಭಿಮಾನಿಗಳ ಅಭಿಮತ. ಅಲ್ಲದೆ, ಇನ್ನೊಂದು ತುದಿಯಲ್ಲಿ ಜಡೇಜಾ ಇದ್ದರು. ಅವರೂ ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದರು. ಸಿಎಸ್ ಕೆ ಗೆಲುವಿಗೆ ಅವರು ಅಡಿಪಾಯ ಹಾಕಿಕೊಟ್ಟಿದ್ದರು. ಆದರೆ ಅದನ್ನು ಧೋನಿ ಬಳಸಲಿಲಲ್ಲ ಎನ್ನುವ ಬೇಸರ ಅಭಿಮಾನಿಗಳಲ್ಲಿತ್ತು.

ಧೋನಿ ಔಟಾದ ತಕ್ಷಣ ಆಘಾತಕ್ಕೊಳಗಾದ ಅಭಿಮಾನಿಯೊಬ್ಬರು ಥೋ... ಎನ್ನುವಂತೆ ಕೈ ಸನ್ನೆ ಮಾಡಿ ಆಘಾತ ವ್ಯಕ್ತಪಡಿಸಿದ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೆಚ್ಚು ಕಡಿಮೆ ಎಲ್ಲಾ ಧೋನಿ ಅಭಿಮಾನಿಗಳ ಭಾವನೆಯೂ ಈಗ ಇದೇ ಆಗಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

IND vs ENG: ಹಾರ್ಟ್ ಬ್ರೇಕ್ ನಂತರ ಟೀಂ ಇಂಡಿಯಾ ಮುಂದಿನ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ

ಮುಂದಿನ ಸುದ್ದಿ
Show comments