Publish Date: Fri, 08 Mar 2019 (08:55 IST)
Updated Date: Fri, 08 Mar 2019 (08:57 IST)
ರಾಂಚಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ರಾಂಚಿ ಕ್ರೀಡಾಂಗಣದಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದ್ದು, ತವರು ನೆಲದಲ್ಲಿ ಇತಿಹಾಸ ನಿರ್ಮಿಸಲು ಧೋನಿ ತುದಿಗಾಲಲ್ಲಿ ನಿಂತಿದ್ದಾರೆ.
ವೃತ್ತಿ ಜೀವನದಲ್ಲಿ 17 ಸಾವಿರ ರನ್ ಪೂರೈಸಿದ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಲು ಧೋನಿಗೆ ಇನ್ನು 33 ರನ್ ಗಳ ಅಗತ್ಯವಿದ್ದು, ಆ ದಾಖಲೆಯನ್ನು ತಮ್ಮ ತವರು ನೆಲದಲ್ಲೇ ಧೋನಿ ಮಾಡಬಹುದು ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.
ಈಗಾಗಲೇ ಸರಣಿಯಲ್ಲಿ 2-0 ಯಿಂದ ಮುನ್ನಡೆಯಲ್ಲಿರುವ ಟೀಂ ಇಂಡಿಯಾಗೆ ಇಂದು ಗೆದ್ದರೆ ಸರಣಿ ಕೈ ವಶ ಮಾಡಿಕೊಂಡಂತೆ. ಬಹುಶಃ ಈ ಪಂದ್ಯಕ್ಕೆ ಕೊಹ್ಲಿ ಆರಂಭಿಕ ಸ್ಥಾನಕ್ಕೆ ರೋಹಿತ್ ಅಥವಾ ಧವನ್ ಗೆ ವಿಶ್ರಾಂತಿ ನೀಡಿ ಕೆಎಲ್ ರಾಹುಲ್ ಗೆ ಸ್ಥಾನ ನೀಡಿದರೂ ಅಚ್ಚರಿಯಿಲ್ಲ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆಯಿಲ್ಲ. ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.