ಬೆಂಗಳೂರು: ಒಂದೆಡೆ ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾ ಟೆಸ್ಟ್ ಪಂದ್ಯವಾಡುತ್ತಿದ್ದರೆ, ಅದೇ ಚಿನ್ನಸ್ವಾಮಿ ಕ್ರೀಡಾಂಗಣದ ಇನ್ನೊಂದು ಕಡೆಯಲ್ಲಿ ಧೋನಿ ಮತ್ತು ವಿರಾಟ್ ಕೊಹ್ಲಿ ಫಿಟ್ನೆಸ್ ಪರೀಕ್ಷೆಗೆ ಹಾಜರಾದರು.
ಎನ್ ಸಿಎಯಲ್ಲಿ ನಡೆದ ಯೋ ಯೋ ಫಿಟ್ನೆಸ್ ಟೆಸ್ಟ್ ಗೆ ಕ್ರಿಕೆಟಿಗರಿಬ್ಬರೂ ಹಾಜರಿದ್ದರು. ಗಾಯದ ಕಾರಣದಿಂದ ವಿರಾಟ್ ಕೊಹ್ಲಿ ಕ್ರಿಕೆಟ್ ನಿಂದ ದೂರವಿದ್ದರೂ ಫಿಟ್ನೆಸ್ ಟೆಸ್ಟ್ ನಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಇಂಗ್ಲೆಂಡ್ ಸರಣಿ ಆರಂಭವಾಗುವ ಹಿನ್ನಲೆಯಲ್ಲಿ ಟೀಂ ಇಂಡಿಯಾ ಆಟಗಾರರೆಲ್ಲರೂ ಕಡ್ಡಾಯವಾಗಿ ಯೋ ಯೋ ಟೆಸ್ಟ್ ಗೆ ಒಳಪಡಬೇಕಿತ್ತು. ಅದರಂತೆ ಈ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾದರಷ್ಟೇ ಕ್ರಿಕೆಟಿಗರಿಗೆ ಇಂಗ್ಲೆಂಡ್ ಪ್ರವಾಸದ ಭಾಗ್ಯ ಸಿಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.