Publish Date: Thu, 21 Jun 2018 (09:47 IST)
Updated Date: Thu, 21 Jun 2018 (09:49 IST)
ದುಬೈ: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಆರೋಪಕ್ಕೆ ಸಿಲುಕಿದ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕ ದಿನೇಶ್ ಚಂಡಿಮಾಲ್ ಗೆ ನಿಷೇಧ ಶಿಕ್ಷೆ ವಿಧಿಸಲಾಗಿದೆ.
ಪಂದ್ಯದ ಎರಡನೇ ದಿನ ಸಿಹಿ ಪದಾರ್ಥವನ್ನು ಚೆಂಡಿಗೆ ಹಾಕಿ ಹೊಳಪುಗೊಳಿಸಲು ಯತ್ನಿಸಿದ್ದು ಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಈ ಆರೋಪದ ಬಗ್ಗೆ ಐಸಿಸಿ ತನಿಖೆ ನಡೆಸಿತ್ತು. ಆರೋಪ ಸಾಬೀತಾದ ಹಿನ್ನಲೆಯಲ್ಲಿ ಚಂಡಿಮಾಲ್ ಗೆ ಒಂದು ಟೆಸ್ಟ್ ಪಂದ್ಯದ ನಿಷೇಧ ಶಿಕ್ಷೆ ವಿಧಿಸಲಾಗಿದೆ.
ಈ ಬಗ್ಗೆ ಕನ್ನಡಿಗ, ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ನೇತೃತ್ವದ ಸಮಿತಿ ವಿಚಾರಣೆ ನಡೆಸಿ ಐಸಿಸಿಗೆ ವರದಿ ಸಲ್ಲಿಸಿತ್ತು. ಈ ವರದಿಯ ಆಧಾರದ ಮೇಲೆ 2 ಅಮಾನತು ಅಂಕ, 2 ನೇ ಟೆಸ್ಟ್ ಪಂದ್ಯದ ಸಂಪೂರ್ಣ ಶುಲ್ಕವನ್ನು ದಂಡವಾಗಿ ಭರಿಸುವಂತೆ ಆದೇಶಿಸಲಾಯಿತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.