Publish Date: Wed, 17 Jun 2026 (11:21 IST)
Updated Date: Wed, 17 Jun 2026 (11:24 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ಅಭಿಮಾನಿಗಳಿಗೆ ಇಂದು ಡಬಲ್ ಧಮಾಕ. ಒಂದು ಕಡೆ ಪುರುಷರ ತಂಡ ಏಕದಿನ ಪಂದ್ಯವಾಡುತ್ತಿದ್ದರೆ ಇನ್ನೊಂದು ಕಡೆ ಮಹಿಳೆಯರ ತಂಡ ಇಂದು ಟಿ20 ವಿಶ್ವಕಪ್ ನ ಎರಡನೇ ಪಂದ್ಯವಾಡಲಿದೆ.
ಮಹಿಳೆಯರಿಗೆ ಎರಡನೇ ಗೆಲುವಿನ ನಿರೀಕ್ಷೆ
ಐಸಿಸಿ ಟಿ20 ವಿಶ್ವಕಪ್ ನಲ್ಲಿ ಮೊದಲ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಭರ್ಜರಿಯಾಗಿ ಗೆದ್ದ ಹರ್ಮನ್ ಪ್ರೀತ್ ಕೌರ್ ಪಡೆ ಇಂದು ಎರಡನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಲೀಡ್ಸ್ ಮೈದಾನದಲ್ಲಿ ನಡೆಯಲಿದೆ. ಕಳೆದ ಪಂದ್ಯ ಭಾರತ ಗೆಲುವು ಸಾಧಿಸಿದರೂ ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್, ರಿಚಾ ಘೋಷ್ ಮತ್ತು ದೀಪ್ತಿ ಶರ್ಮಾ ಮಾತ್ರವೇ ಪ್ರಮುಖ ಪಾತ್ರ ವಹಿಸಿದ್ದರು.
ವಿಶೇಷವಾಗಿ ಬೌಲಿಂಗ್ ನಲ್ಲಿ ಭಾರತ ಮಹಿಳಾ ತಂಡಕ್ಕೆ ಟಾಪ್ ಬೌಲಿಗರು ಕೈಕೊಟ್ಟಿದ್ದರು. ಆರುಂಧತಿ ರೆಡ್ಡಿ, ಕ್ರಾಂತಿ ಗೌಡ್ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಿದರೆ ಮಾತ್ರ ಮುಂದಿನ ಹಂತದಲ್ಲಿ ಕಠಿಣ ತಂಡಗಳ ಎದುರು ಗೆಲ್ಲಬಹುದಾಗಿದೆ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗುವುದು. ಸ್ಟಾರ್ ಸ್ಪೋರ್ಟ್ಸ್ ನಲ್ಲಿ ಮತ್ತು ಜಿಯೋ ಹಾಟ್ ಸ್ಟಾರ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.
ಪುರುಷರಿಗೆ ಅಫ್ಘಾನಿಸ್ತಾನ ವಿರುದ್ಧ ಸರಣಿ ಗೆಲ್ಲುವ ಅವಕಾಶ
ಇನ್ನೊಂದೆಡೆ ಟೀಂ ಇಂಡಿಯಾ ಪುರುಷರ ತಂಡ ಇಂದು ಏಕನಾ ಮೈದಾನದಲ್ಲಿ ಅಫ್ಘಾನಿಸ್ತಾನ ವಿರುದ್ಧ ಎರಡನೇ ಏಕದಿನ ಪಂದ್ಯವಾಡಲಿದೆ. ಕಳೆದ ಪಂದ್ಯದಲ್ಲಿ ಅನುಭವಿ ರೋಹಿತ್ ಶರ್ಮಾ ಸಂವಹನ ಕೊರತೆಯಿಂದ ರನೌಟ್ ಆಗಿದ್ದರು. ಈ ಪಂದ್ಯದಲ್ಲಿ ಅವರಿಂದ ಭರ್ಜರಿ ಇನಿಂಗ್ಸ್ ನಿರೀಕ್ಷಿಸಲಾಗುತ್ತಿದೆ. ಕಳೆದ ಪಂದ್ಯದಲ್ಲಿ ಅಫ್ಘಾನಿಸ್ತಾನವೂ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತ್ತು. ಹಾಗಿದ್ದರೂ ಭಾರತವೇ ಈ ಸರಣಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಈ ಪಂದ್ಯ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಹಾಟ್ ಸ್ಟಾರ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ