Webdunia - Bharat's app for daily news and videos

Install App

ಚಾಂಪಿಯನ್ಸ್ ಟ್ರೋಫಿಗೆ ಸಜ್ಜಾದ ಎಂಟು ಬಲಿಷ್ಠ ತಂಡಗಳು: ನಾಳೆಯಿಂದ ಹೈವೋಲ್ಟೇಜ್‌ ಪಂದ್ಯಗಳು

Sampriya
ಮಂಗಳವಾರ, 18 ಫೆಬ್ರವರಿ 2025 (17:17 IST)
Photo Courtesy X
ಲಾಹೋರ್‌: ಪಾಕಿಸ್ತಾನದ ಆತಿಥ್ಯದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್‌ ಟೂರ್ನಿಗೆ ನಾಳೆ ಚಾಲನೆ ದೊರೆಯಲಿದೆ. ಬುಧವಾರ ಮಧ್ಯಾಹ್ನ 2.30ಕ್ಕೆ ನಡೆಯುವ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗುತ್ತಿವೆ.

ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಕಣಕ್ಕೆ ಇಳಿಯುತ್ತಿದೆ.  ಫೆಬ್ರುವರಿ 20ರಂದು ಭಾರತ ತಂಡವು ಬಾಂಗ್ಲಾದೇಶದ ಸವಾಲನ್ನು ಎದುರಿಸಲಿದೆ. 2017ರಲ್ಲಿ ಕೊನೆಯ ಬಾರಿ ಟೂರ್ನಿ ನಡೆದಿದ್ದು, ಫೈನಲ್‌ನಲ್ಲಿ ಭಾರತ ತಂಡವನ್ನು ಮಣಿಸಿ ಪಾಕಿಸ್ತಾನ ಚಾಂಪಿಯನ್‌ ಆಗಿತ್ತು.

ಭಾರತದ ಪಂದ್ಯಗಳು ಪಾಕಿಸ್ತಾನ ಆತಿಥ್ಯದಲ್ಲಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜನೆಯಾಗುತ್ತಿದೆ. ಭಾರತ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಭಾರತದ ಸ್ಟಾರ್ ಆಟಗಾರರಾದ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿ ಅವರಿಗೆ ಇದು ಮಹತ್ವದ ಟೂರ್ನಿಯಾಗಿದೆ.

ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್‌ ಕೊಹ್ಲಿ ಅವರು ಹೊಸ ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 14,000 ರನ್ ಮೈಲಿಗಲ್ಲು ತಲುಪಲು ಕೊಹ್ಲಿಗಿನ್ನು ಕೇವಲ 37 ರನ್‌ಗಳ ಅಗತ್ಯವಿದೆ.  297 ಪಂದ್ಯಗಳನ್ನು ಆಡಿರುವ ಕೊಹ್ಲಿ 13,963 ರನ್ ಪೇರಿಸಿದ್ದಾರೆ.  

2013ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ತಂಡವು ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಐದು ರನ್ ಅಂತರದ ರೋಚಕ ಗೆಲುವು ದಾಖಲಿಸಿತ್ತು. ಬಳಿಕ 2017ರಲ್ಲಿ ವಿರಾಟ್ ಕೊಹ್ಲಿ ಅವರ ನಾಯಕತ್ವದಲ್ಲೇ ಭಾರತ ರನ್ನರ್ ಅಪ್ ಆಗಿತ್ತು.

ಟೂರ್ನಿಯಲ್ಲಿ ಒಟ್ಟು ಎಂಟು ತಂಡಗಳು ಟ್ರೋಫಿಗಾಗಿ ಪೈಪೋಟಿ ನಡೆಸಲಿದ್ದು, ಮಾರ್ಚ್‌ 9ರವರೆಗೆ ಕ್ರೀಡಾಭಿಮಾನಿಗಳಿಗೆ ಭರಪೂರ ಮನರಂಜನೆ ದೊರೆಯಲಿದೆ. 9ರಂದು ಫೈನಲ್‌ ಹಣಾಹಣಿ ನಿಗದಿಯಾಗಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments