ಲಾರ್ಡ್ಸ್: ಜಸ್‌ಪ್ರೀತ್ ಬೂಮ್ರಾ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡವು ಭಾರತದ ವಿರುದ್ಧದ ಮೂರನೇ ಟೆಸ್ಟ್ ಮೊದಲ ಇನ್ನಿಂಗ್ಸ್‌ನಲ್ಲಿ 387 ರನ್‌ಗೆ ಆಲ್ ಔಟ್ ಆಗಿದೆ.
ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ನ ಎರಡನೇ ದಿನವಾದ ಶುಕ್ರವಾರ ಜೋ ರೂಟ್(104) ಆಕರ್ಷಕ ಶತಕ ಸಿಡಿಸಿದರು. ಉಳಿದಂತೆ ಜೆಮ್ಮಿಸ್ಮಿತ್(51) ಮತ್ತು ಬ್ರೈಡನ್ ಕಾರ್ಸ್(56) ಅವರ ಅರ್ಧ ಶತಕದ ಬಳದಿಂದ ಇಂಗ್ಲೆಂಡ್ ತಂಡವು ಸವಾಲಿನ ಮೊತ್ತವನ್ನು ಕಲೆ ಹಾಕಿತು.
ಭಾರತದ ಪರ ವಿಶ್ವದ ಅಗ್ರಮಾನ್ಯ ವೇಗಿ ಜಸ್ಪ್ರೀತ್ ಬೂಮ್ರಾ 5 ವಿಕೆಟ್ ಪಡೆದು ಎದುರಾಳಿ ತಂಡಕ್ಕೆ ದೊಡ್ಡ ಆಘಾತ ನೀಡಿದರು. ವೇಗಿಗಳಾದ ಮೊಹಮ್ಮದ್ ಸಿರಾಜ್, ನಿತೇಶ್ ಕುಮಾರ್ ರೆಡ್ಡಿ ತಲಾ 2 ವಿಕೆಟ್ ಪಡೆದು ಮಿಂಚಿದರು.
5 ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 1– 1 ಗೆಲುವಿನೊಂದಿಗೆ ಸಮಬಲ ಸಾಧಿಸಿದೆ. ಮೊದಲ ಪಂದ್ಯ ಇಂಗ್ಲೆಂಡ್ ಗೆದ್ದಿದ್ದರೆ, ಎರಡನೇ ಪಂದ್ಯವನ್ನು ಭಾರತ ಜಯಿಸಿದೆ.