Webdunia - Bharat's app for daily news and videos

Install App

ENG vs IND Test: ಜಸ್‌ಪ್ರೀತ್ ಬೂಮ್ರಾ ದಾಳಿಗೆ ಇಂಗ್ಲೆಂಡ್ ತತ್ತರ, 387ಕ್ಕೆ ಆಲೌಟ್‌

Sampriya
ಶುಕ್ರವಾರ, 11 ಜುಲೈ 2025 (20:47 IST)
Photo Credit X
ಲಾರ್ಡ್ಸ್‌:  ಜಸ್‌ಪ್ರೀತ್ ಬೂಮ್ರಾ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡವು ಭಾರತದ ವಿರುದ್ಧದ ಮೂರನೇ ಟೆಸ್ಟ್‌ ಮೊದಲ ಇನ್ನಿಂಗ್ಸ್‌ನಲ್ಲಿ 387 ರನ್‌ಗೆ ಆಲ್‌ ಔಟ್‌ ಆಗಿದೆ. 

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ ನ ಎರಡನೇ ದಿನವಾದ ಶುಕ್ರವಾರ ಜೋ ರೂಟ್‌(104) ಆಕರ್ಷಕ ಶತಕ ಸಿಡಿಸಿದರು. ಉಳಿದಂತೆ ಜೆಮ್ಮಿಸ್ಮಿತ್‌(51) ಮತ್ತು ಬ್ರೈಡನ್ ಕಾರ್ಸ್‌(56) ಅವರ ಅರ್ಧ ಶತಕದ ಬಳದಿಂದ ಇಂಗ್ಲೆಂಡ್ ತಂಡವು ಸವಾಲಿನ ಮೊತ್ತವನ್ನು ಕಲೆ ಹಾಕಿತು. 

ಭಾರತದ ಪರ ವಿಶ್ವದ ಅಗ್ರಮಾನ್ಯ ವೇಗಿ ಜಸ್ಪ್ರೀತ್ ಬೂಮ್ರಾ 5 ವಿಕೆಟ್ ಪಡೆದು ಎದುರಾಳಿ ತಂಡಕ್ಕೆ ದೊಡ್ಡ ಆಘಾತ ನೀಡಿದರು. ವೇಗಿಗಳಾದ ಮೊಹಮ್ಮದ್ ಸಿರಾಜ್, ನಿತೇಶ್‌ ಕುಮಾರ್ ರೆಡ್ಡಿ ತಲಾ 2 ವಿಕೆಟ್ ಪಡೆದು ಮಿಂಚಿದರು. 

5 ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 1– 1 ಗೆಲುವಿನೊಂದಿಗೆ ಸಮಬಲ ಸಾಧಿಸಿದೆ. ಮೊದಲ ಪಂದ್ಯ ಇಂಗ್ಲೆಂಡ್ ಗೆದ್ದಿದ್ದರೆ, ಎರಡನೇ ಪಂದ್ಯವನ್ನು ಭಾರತ ಜಯಿಸಿದೆ. <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments