ಲಂಡನ್: ಟೀಂ ಇಂಡಿಯಾ ವಿರುದ್ಧ ನಾಲ್ಕನೇ ಟೆಸ್ಟ್ ಸೋತ ಬಳಿಕ ಎಚ್ಚೆತ್ತುಕೊಂಡಿರುವ ಇಂಗ್ಲೆಂಡ್ ಐದನೇ ಟೆಸ್ಟ್ ಪಂದ್ಯಕ್ಕೆ ಕೊಂಚ ಬದಲಾವಣೆ ಮಾಡಿಕೊಂಡಿದೆ.
ಅಂತಿಮ ಟೆಸ್ಟ್ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿರುವ ಇಂಗ್ಲೆಂಡ್ ತಂಡಕ್ಕೆ ಜೋಸ್ ಬಟ್ಲರ್ ಮತ್ತು ಜ್ಯಾಕ್ ಲೀಚ್ ನ್ನು ಮರು ಸೇರ್ಪಡೆಗೊಳಿಸಿದೆ.
ಸೆಪ್ಟೆಂಬರ್ 10 ರಿಂದ ಮ್ಯಾಂಚೆಸ್ಟರ್ ನಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯಕ್ಕೆ ಸ್ಯಾಮ್ ಬಿಲ್ಲಿಂಗ್ಸ್ ಗೆ ಕೊಕ್ ಕೊಟ್ಟಿದ್ದು, ಇಬ್ಬರು ಆಟಗಾರರನ್ನು ಮರು ಸೇರ್ಪಡೆಗೊಳಿಸಿದೆ. ಜೋಸ್ ಬಟ್ಲರ್ ತಮ್ಮ ವೈಯಕ್ತಿಕ ಕಾರಣದಿಂದ ಕಳೆದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದರು.