Select Your Language

Notifications

webdunia
webdunia
webdunia
webdunia

ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ ಮೊಯಿನ್ ಅಲಿ

ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ ಮೊಯಿನ್ ಅಲಿ
ಲಂಡನ್ , ಸೋಮವಾರ, 27 ಸೆಪ್ಟಂಬರ್ 2021 (10:39 IST)
ಲಂಡನ್: ಇಂಗ್ಲೆಂಡ್ ಆಲ್ ರೌಂಡರ್, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಐಪಿಎಲ್ ಆಟಗಾರ ಮೊಯಿನ್ ಅಲಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.


ಸೀಮಿತ ಓವರ್ ಗಳ ಕ್ರಿಕೆಟ್ ಕಡೆಗೆ ಹೆಚ್ಚು ಗಮನಕೊಡಲು ಈ ನಿರ್ಧಾರಕ್ಕೆ ಬಂದಿರುವುದಾಗಿ ಅವರು ಹೇಳಿದ್ದಾರೆ. ಈ ಬಗ್ಗೆ ಈಗಾಗಲೇ ಕೋಚ್, ಇಂಗ್ಲೆಂಡ್ ನಾಯಕ ಜೋ ರೂಟ್, ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗೆ ತಮ್ಮ ನಿರ್ಧಾರ ತಿಳಿಸಿದ್ದಾರೆ.

ಒಟ್ಟು 64 ಟೆಸ್ಟ್ ಪಂದ್ಯವಾಡಿರುವ 34 ವರ್ಷದ ಮೊಯಿನ್ ಅಲಿ 2914 ರನ್ ಮತ್ತು 195 ವಿಕೆಟ್ ಕಬಳಿಸಿದ್ದಾರೆ. ಕಳೆದ ಬಾರಿ ಭಾರತ ಪ್ರವಾಸ ಮಾಡಿದ್ದಾಗ ಇಂಗ್ಲೆಂಡ್ ಪರ ಕೊನೆಯ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಳುತ್ತಿದ್ದ ಮುಂಬೈ ಇಂಡಿಯನ್ಸ್ ಬ್ಯಾಟ್ಸ್ ಮನ್ ಇಶಾನ್ ಕಿಶನ್ ಸಮಾಧಾನಿಸಿದ ವಿರಾಟ್ ಕೊಹ್ಲಿ