Publish Date: Wed, 01 Aug 2018 (15:29 IST)
Updated Date: Wed, 01 Aug 2018 (15:34 IST)
ಎಡ್ಜ್ ಬಾಸ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಮೊದಲ ಟೆಸ್ಟ್ ಪಂದ್ಯ ಎಡ್ಜ್ ಬಾಸ್ಟನ್ ನಲ್ಲಿ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ.
ಟಾಸ್ ಗೆದ್ದಿರುವ ಅತಿಥೇಯ ತಂಡದ ನಾಯಕ ಜೋ ರೂಟ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇದರಿಂದಾಗಿ ಟೀಂ ಇಂಡಿಯಾಕ್ಕೆ ಮೊದಲು ಬೌಲಿಂಗ್ ಮಾಡುವ ಅವಕಾಶ ಸಿಕ್ಕಿದೆ.
ಭಾರತ ತಂಡದಲ್ಲಿ ಶಿಖರ್ ಧವನ್ ಮತ್ತು ಮುರಳಿ ವಿಜಯ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಕೆಎಲ್ ರಾಹುಲ್ ಗೆ ಮೂರನೇ ಕ್ರಮಾಂಕದಲ್ಲಿ ಆಡಲಿಳಿಯಲಿದ್ದಾರೆ. ಉಳಿದಂತೆ ರವಿಚಂದ್ರನ್ ಅಶ್ವಿನ್ ರೂಪದಲ್ಲಿ ಓರ್ವ ಸ್ಪಿನ್ನರ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಉಮೇಶ್ ಯಾದವ್ ರೂಪದಲ್ಲಿ ಮೂವರು ವೇಗಿಗಳೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯಲಿದೆ.
ಕುಲದೀಪ್ ಯಾದವ್, ಚೇತೇಶ್ವರ ಪೂಜಾರ ಗೆ ಈ ಪಂದ್ಯದಲ್ಲಿ ಅವಕಾಶ ಸಿಕ್ಕಿಲ್ಲ. ಕಾರ್ತಿಕ್ ಕೀಪಿಂಗ್ ಮಾಡಲಿದ್ದು, ಉಳಿದಂತೆ ಅಜಿಂಕ್ಯಾ ರೆಹಾನೆ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ತಂಡದಲ್ಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.