Webdunia - Bharat's app for daily news and videos

Install App

ಪಾಕಿಸ್ತಾನಕ್ಕೆ ಯಾಕೆ ಬರಲ್ಲ ನೀವು; ತರಾಟೆಗೆ ತೆಗೆದುಕೊಂಡ ಅಭಿಮಾನಿಗೆ ಸೂರ್ಯಕುಮಾರ್ ಯಾದವ್ ಉತ್ತರ

Krishnaveni K
ಮಂಗಳವಾರ, 12 ನವೆಂಬರ್ 2024 (10:38 IST)
ಡರ್ಬನ್: ಟೀಂ ಇಂಡಿಯಾ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಗೆ ದ ಆಫ್ರಿಕಾದಲ್ಲಿ ಪಾಕಿಸ್ತಾನಿ ಅಭಿಮಾನಿಯೊಬ್ಬರು ನೀವು ಯಾಕೆ ಪಾಕಿಸ್ತಾನಕ್ಕೆ ಬರಲ್ಲ ಎಂದು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ. ಇದಕ್ಕೆ ಸೂರ್ಯಕುಮಾರ್ ಯಾದವ್ ಉತ್ತರ ಹೀಗಿತ್ತು.

ಸೂರ್ಯಕುಮಾರ್ ಯಾದವ್ ಟಿ20 ಸರಣಿಗಾಗಿ ದ ಆಫ್ರಿಕಾದಲ್ಲಿದ್ದಾರೆ. ರಿಂಕು ಸಿಂಗ್ ಜೊತೆ ಹೊರಗಡೆ ಸುತ್ತಾಡಲು ಬಂದಿದ್ದ ಸೂರ್ಯಕುಮಾರ್ ಯಾದವ್ ತಮ್ಮನ್ನು ಮುತ್ತಿಕೊಂಡ ಅಭಿಮಾನಿಗಳಿಗೆ ಸೆಲ್ಫೀಗೆ ಪೋಸ್ ನೀಡಿದ್ದಾರೆ. ಈ ವಿಡಿಯೋವನ್ನು ಅಭಿಮಾನಿಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ಅಭಿಮಾನಿಯೊಬ್ಬರು ‘ಎಲ್ಲಾ ಸರಿ ನೀವು ಯಾಕೆ ಪಾಕಿಸ್ತಾನಕ್ಕೆ ಬರಲು ಒಪ್ಪುತ್ತಿಲ್ಲ?’ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸೂರ್ಯಕುಮಾರ್ ಯಾದವ್ ‘ಅರೇ.. ಇದೆಲ್ಲಾ ನಮ್ಮ ಕೈಯಲ್ಲಿಲ್ಲ’ ಎಂದಿದ್ದಾರೆ. ಅವರ ಈ ಉತ್ತರ ಈಗ ಎಲ್ಲರ ಗಮನ ಸೆಳೆಯುತ್ತಿದೆ.

ಮಾರ್ಚ್ ನಲ್ಲಿ ಪಾಕಿಸ್ತಾನದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ನಡೆಯಲಿದೆ. ಆದರೆ ಪಾಕಿಸ್ತಾನಕ್ಕೆ ಭಾರತ ತಂಡವನ್ನು ಕಳುಹಿಸಲು ಕೇಂದ್ರ ಸರ್ಕಾರ ಅನುಮತಿ ನೀಡುತ್ತಿಲ್ಲ. ಈಗಾಗಲೇ ಇದನ್ನು ಐಸಿಸಿಗೆ ಕೂಡಾ ಮಾಹಿತಿ ನೀಡಿದೆ. ಇದು ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments