Webdunia - Bharat's app for daily news and videos

Install App

ಏಕದಿನ ವಿಶ್ವಕಪ್ ನಿಜಕ್ಕೂ ಭಾರತದಲ್ಲೇ ನಡೆಯುತ್ತಿದೆಯಾ? ಅವ್ಯವಸ್ಥೆ, ನೀರಸ ಪ್ರತಿಕ್ರಿಯೆಗೆ ಆಕ್ರೋಶ!

Webdunia
ಶನಿವಾರ, 7 ಅಕ್ಟೋಬರ್ 2023 (16:57 IST)
Photo Courtesy: Twitter
ಮುಂಬೈ: ಈ ಬಾರಿ ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಗೆ ಸಿಗುತ್ತಿರುವ ನೀರಸ ಪ್ರತಿಕ್ರಿಯೆ ಬಗ್ಗೆ ಅಭಿಮಾನಿಗಳು, ಮಾಜಿ ಕ್ರಿಕೆಟಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಭಾರತದಲ್ಲಿ ಕ್ರಿಕೆಟ್ ಜನಪ್ರಿಯ ಕ್ರೀಡೆ. ಆದರೆ ಬಿಸಿಸಿಐ ಉದ್ಘಾಟನಾ ಸಮಾರಂಭವನ್ನೂ ಆಯೋಜಿಸಿರಲಿಲ್ಲ. ಬಹುಶಃ ಕೆಲವರಿಗೆ ಇನ್ನೂ ವಿಶ್ವಕಪ್ ಆರಂಭವಾಗಿದೆ ಎಂದೇ ಗೊತ್ತಿರಲ್ಲ. ಅಷ್ಟು ನೀರಸವಾಗಿ ಪ್ರಚಾರ ನೀಡಲಾಗಿದೆ. ಕೆಲವು ಕಡೆ ಮೈದಾನಗಳಲ್ಲಿ ಅವ್ಯವಸ್ಥೆಯ ಆರೋಪಗಳೂ ಕೇಳಿಬಂದಿದೆ.

ಹೆಚ್ಚು ಜನರು ಸೇರುವ ಮೈದಾನಗಳಲ್ಲಿ ಪ್ರಮುಖ ಪಂದ್ಯ ಆಯೋಜಿಸದೇ ಇರುವುದು, ಪ್ರಮುಖ ಪಂದ್ಯಗಳಿಗೆ ಮಳೆಯಾಗುತ್ತಿರುವುದು ವೀಕ್ಷಕರಲ್ಲಿ ನಿರಾಸಕ್ತಿ ಮೂಡಿಸಿದೆ. ಧರ್ಮಶಾಲಾದಲ್ಲಿ ನಡೆದಿದ್ದ ಪಂದ್ಯದಲ್ಲಿ ಒದ್ದೆ ಔಟ್ ಫೀಲ್ಡ್ ನಿಂದಾಗಿ ಆಟಗಾರರು ಗಾಯಗೊಳ್ಳುವಂತಹ ಪರಿಸ್ಥಿತಿ ಎದುರಾಗಿತ್ತು. ಕೆಲವೆಡೆ ಸೀಟಿಂಗ್ ವ್ಯವಸ್ಥೆ ಬಗ್ಗೆಯೂ ಅಸಮಾಧಾನ ಕೇಳಿಬಂದಿದೆ. ವಿಶ್ವಕಪ್ ನಂತಹ ಪ್ರತಿಷ್ಠಿತ ಟೂರ್ನಿಯನ್ನು ಆಯೋಜಿಸುವಾಗ ಅದಕ್ಕೆ ತಕ್ಕ ವರ್ಣರಂಜಿತ ಪ್ರಚಾರ, ಅಬ್ಬರ ಯಾವುದೂ ಇಲ್ಲದೇ ಇಷ್ಟು ನೀರಸವಾಗಲು ಬಿಸಿಸಿಐ ಮೇಲೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಇದುವರೆಗೆ ನಡೆದ ಎಲ್ಲಾ ಪಂದ್ಯಗಳಿಗೂ ಜನರೇ ವಿರಳ ಸಂಖ್ಯೆಯಲ್ಲಿ ಹಾಜರಿದ್ದರು. ಕ್ರಿಕೆಟ್ ನನ್ನು ಧರ್ಮದಂತೆ ಪ್ರೀತಿಸುವ ಭಾರತದಲ್ಲೇ ಇಷ್ಟು ನೀರಸವಾಗಿ ವಿಶ್ವಕಪ್ ನಡೆಯುತ್ತಿರುವುದು ಎಲ್ಲರ ಬೇಸರಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments