Publish Date: Thu, 17 Aug 2023 (08:50 IST)
Updated Date: Thu, 17 Aug 2023 (09:04 IST)
ಬೆಂಗಳೂರು: ರಸ್ತೆ ಅಪಘಾತದ ಬಳಿಕ ಚೇತರಿಸಿಕೊಳ್ಳುತ್ತಿರುವ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಈಗ ಪ್ರದರ್ಶನ ಪಂದ್ಯವೊಂದರಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಹೊಡೆಬಡಿಯ ಆಟಕ್ಕೆ ಹೆಸರುವಾಸಿಯಾಗಿರುವ ರಿಷಬ್ ಸದ್ಯಕ್ಕೆ ಎನ್ ಸಿಎಸ್ ನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಇದೀಗ ಎನ್ ಸಿಎನಲ್ಲಿ ಬ್ಯಾಟಿಂಗ್ ಮತ್ತು ಕೀಪಿಂಗ್ ಅಭ್ಯಾಸ ನಡೆಸುತ್ತಿದ್ದಾರೆ. ಅಪಘಾತ ನಡೆದು ಕಾಲಿಗೆ ಶಸ್ತ್ರಚಿಕಿತ್ಸೆಗೊಳಗಾದರೂ ಶೀಘ್ರದಲ್ಲೇ ಚೇತರಿಸಿಕೊಂಡು ಎಲ್ಲರೂ ಬೆರಗಾಗುವಂತೆ ಮಾಡಿದ್ದರು.
ಇದೀಗ ಬೆಂಗಳೂರಿನಲ್ಲಿ ಸ್ವಾತಂತ್ರ್ಯೋತ್ವದ ದಿನದಂದು ನಡೆದ ಪ್ರದರ್ಶನ ಪಂದ್ಯವೊಂದರಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಭರ್ಜರಿ ಸಿಕ್ಸರ್ ಮೂಲಕ ನೆರೆದಿದ್ದವರನ್ನುರಂಜಿಸಿದ್ದಾರೆ. ಅವರು ಸಿಕ್ಸರ್ ಬಾರಿಸುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಫ್ಯಾನ್ಸ್ ತಮ್ಮ ಮೆಚ್ಚಿನ ಕ್ರಿಕೆಟಿಗನ ಬ್ಯಾಟಿಂಗ್ ಬಹಳ ದಿನಗಳ ನಂತರ ನೋಡಿದ ಖುಷಿ ವ್ಯಕ್ತಪಡಿಸಿದ್ದಾರೆ.