ನೀವ್ಯಾಕೆ ಹೀಗೆ ಮಾಡಿದ್ರಿ, ಸೂರ್ಯಕುಮಾರ್ ಯಾದವ್ ಮೇಲೆ ಸಿಟ್ಟಾದ ಫ್ಯಾನ್ಸ್

Krishnaveni K
ಬುಧವಾರ, 10 ಸೆಪ್ಟಂಬರ್ 2025 (08:51 IST)
Photo Credit: X
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ತಂಡಗಳ ನಾಯಕರ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಸೂರ್ಯಕುಮಾರ್ ಯಾದವ್ ಮಾಡಿದ ಕೆಲಸವೊಂದಕ್ಕೆ ಫ್ಯಾನ್ಸ್ ಸಿಟ್ಟಾಗಿದ್ದಾರೆ. ನೀವ್ಯಾಕೆ ಹೀಗೆ ಮಾಡಿದ್ರಿ ಎಂದು ಟೀಂ ಇಂಡಿಯಾ ನಾಯಕನನ್ನು ಪ್ರಶ್ನೆ ಮಾಡುತ್ತಿದ್ದಾರೆ.

ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಏಷ್ಯಾ ಕಪ್ ನಲ್ಲಿ ಭಾಗಿಯಾಗಿರುವ ಎಲ್ಲಾ ತಂಡಗಳ ನಾಯಕರೂ ಇದ್ದರು. ಭಾರತ ಮತ್ತು ಪಾಕಿಸ್ತಾನ ತಂಡಗಳ ನಾಯಕರೂ ಒಂದೇ ವೇದಿಕೆ ಹಂಚಿಕೊಂಡಿದ್ದರು. ವೇದಿಕೆಯಲ್ಲಿ ಇಬ್ಬರೂ ಪರಸ್ಪರ ಮುಖ ನೋಡದೇ ಇದ್ದರೂ ಇದಕ್ಕೆ ಮೊದಲು ಸೂರ್ಯಕುಮಾರ್ ತಾವಾಗಿಯೇ ಪಾಕ್ ನಾಯಕನ ಕೈಲುಕಿದ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ವೇದಿಕೆಯಲ್ಲಿ ಎಲ್ಲಾ ನಾಯಕರು ಜೊತೆಯಾಗಿ ನಿಂತು ಫೋಟೋಗೆ ಪೋಸ್ ಕೊಟ್ಟ ಬಳಿಕ ಪಾಕ್ ನಾಯಕ ಸಲ್ಮಾನ್ ಅಘಾ ತಿರುಗಿಯೂ ನೋಡದೇ ವೇದಿಕೆಯಿಂದ ತೆರಳಿದ್ದರು. ಆದರೆ  ಸೂರ್ಯ ಇತರೆ ನಾಯಕರ ಜೊತೆಗೆ ಸಲ್ಮಾನ್ ಅಘಾ ಬಳಿ ತೆರಳಿ ತಾವಾಗಿಯೇ ಶೇಕ್ ಹ್ಯಾಂಡ್ ಮಾಡಿದ್ದಾರೆ. ಇದಲ್ಲದೆ ಪಾಕಿಸ್ತಾನ ಮೂಲದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮೊಹ್ಸಿನ್ ನಖ್ವಿ ಬಳಿ ತೆರಳಿ ಕೈಕುಲುಕಿದ್ದಾರೆ.

ಈ ವಿಚಾರಕ್ಕೆ ಭಾರತೀಯ ಫ್ಯಾನ್ಸ್ ಸಿಟ್ಟಾಗಿದ್ದಾರೆ. ಪಾಕಿಸ್ತಾನ ನಾಯಕನ ಬಳಿ ನೀವಾಗಿಯೇ ತೆರಳಿ ಕೈ ಕುಲುಕುವ ಅಗತ್ಯವೇನಿತ್ತು?  ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ಮತ್ತೆ ಕೆಲವರು ಇನ್ನೂ ಮುಂದುವರಿದು ದೇಶದ್ರೋಹಿ ಎಂದು ಅತಿರೇಕ ಪದ ಬಳಸಿ ನಿಂದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಮುಂದಿನ ಸುದ್ದಿ
Show comments