Webdunia - Bharat's app for daily news and videos

Install App

ರೋಹಿತ್, ಕೊಹ್ಲಿ ದಾಖಲೆಯನ್ನೂ ಮೀರಿದ ಮಿಥಾಲಿ ರಾಜ್ ಗೆ ಕಪ್ ಗೆದ್ದು ಬಾ ಎಂದು ಹಾರೈಸಿದ ಅಭಿಮಾನಿಗಳು!

Webdunia
ಶುಕ್ರವಾರ, 16 ನವೆಂಬರ್ 2018 (09:52 IST)
ಮುಂಬೈ: ವೆಸ್ಟ್ ಇಂಡೀಸ್ ನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತವನ್ನು ಸೆಮಿಫೈನಲ್ ಗೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಗೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ.

ಪಾಕಿಸ್ತಾನ ವಿರುದ್ಧ ಅರ್ಧಶತಕ ಸಿಡಿಸಿ ತಂಡಕ್ಕೆ ಆಧಾರವಾದ ಮಿಥಾಲಿ ಭಾರತದ ಪರ ಟಿ20 ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಗಳಿಸಿದ ದಾಖಲೆ ಮಾಡಿದ್ದರು. ಅವರು ಟಿ20 ಕ್ರಿಕೆಟ್ ರನ್ ಗಳಿಕೆಯಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾರನ್ನೂ ಹಿಂದಿಕ್ಕಿರುವುದು ವಿಶೇಷ. ಸದ್ಯಕ್ಕೆ ಮಿಥಾಲಿ ರನ್ ಗಳಿಕೆ 2283.

ನಿನ್ನೆ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲೂ ಅರ್ಧಶತಕ ಸಿಡಿಸಿ ಗೆಲುವಿನ ರೂವಾರಿಯಾದ ಮಿಥಾಲಿ ರಾಜ್ ಗೆ ಈ ಬಾರಿ ಕಪ್ ಗೆದ್ದು ಬಾ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ. ನೀವು ಮಹಿಳಾ ಕ್ರಿಕೆಟ್ ನ ಸೂಪರ್ ಸ್ಟಾರ್. ನಮ್ಮ ಹೆಮ್ಮೆ. ಈ ಬಾರಿ ಕಪ್ ಗೆಲ್ಲಿಸಿಕೊಡಿ ಎಂದು ಮಿಥಾಲಿಗೆ ಶುಭ ಹಾರೈಸಿದ್ದಾರೆ. ಮಹಿಳಾ ಕ್ರಿಕೆಟ್ ನ ಸಚಿನ್ ತೆಂಡುಲ್ಕರ್ ಎಂದೇ ಪರಿಗಣಿಸಲ್ಪಟ್ಟಿರುವ ಮಿಥಾಲಿಗೆ ಇದು ಕೊನೆಯ ಟಿ20 ವಿಶ್ವಕಪ್ ಆಗಿದೆ. 35 ವರ್ಷದ ಮಿಥಾಲಿ ಇನ್ನು ಟಿ20 ವಿಶ್ವಕಪ್ ಆಡಲ್ಲ ಎಂದು ಈಗಾಗಲೇ ಘೋಷಿಸಿದ್ದಾರೆ. ಹೀಗಾಗಿ ಕೊನೆಯ ಟಿ20 ವಿಶ್ವಕಪ್ ಗೆದ್ದು ಸ್ಮರಣೀಯವಾಗಿಸುತ್ತಾರಾ ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಲೆಗ್‌ಸ್ಪಿನ್ನರ್‌ ಅಮಿತ್ ಮಿಶ್ರಾ

ಲಂಡನ್ ನಲ್ಲಿ ಮಾಡಿದ್ರೇನು, ವಯಸ್ಸಾದ್ರೇನು ವಿರಾಟ್ ಕೊಹ್ಲಿ ಫಿಟ್ನೆಸ್ ಟೆಸ್ಟ್ ರಿಸಲ್ಟ್ ನೋಡಿ

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಈ ರೀತಿ ಆಡುವುದು ಇದೇ ಫಸ್ಟ್

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೂರು ತಿಂಗಳ ಬಳಿಕ ಕೊನೆಗೂ ಮೌನ ಮುರಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಮಾತ್ರ ಏನು ಸ್ಪೆಷಲ್ಲಾ.. ಲಂಡನ್ ವಾಸಿ ಕೊಹ್ಲಿಗೆ ಅಲ್ಲಿಯೇ ಫಿಟ್ನೆಸ್ ಟೆಸ್ಟ್

ಮುಂದಿನ ಸುದ್ದಿ
Show comments