Webdunia - Bharat's app for daily news and videos

Install App

ಮೊದಲ ಟಿ20 ಪಂದ್ಯ: ಟಾಸ್ ಗೆದ್ದು ಆಂಗ್ಲರನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದ ಸೂರ್ಯಕುಮಾರ್‌

Sampriya
ಬುಧವಾರ, 22 ಜನವರಿ 2025 (19:45 IST)
Photo Courtesy X
ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಇಂದಿನಿಂದ ಆರಂಭವಾಗಿದೆ.  ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಇಂಗ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ಆರಂಭಿಸಿದೆ. ಭಾರತನ ತಂಡವನ್ನು ಸೂರ್ಯಕುಮಾರ್ ಯಾದವ್‌ ಮತ್ತು ಇಂಗ್ಲೆಂಡ್ ತಂಡವನ್ನು ಜೋಸ್ ಬಟ್ಲರ್ ಮುನ್ನಡೆಸುತ್ತಿದ್ದಾರೆ.

ಈಡನ್ ಗಾರ್ಡನ್‌ನಲ್ಲಿ 14 ವರ್ಷಗಳ ನಂತರ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. 2011ರಲ್ಲಿ ಈ ಮೈದಾನದಲ್ಲಿ ಇವರಿಬ್ಬರ ನಡುವೆ ಕೊನೆಯ ಬಾರಿ ಟಿ20 ಪಂದ್ಯ ನಡೆದಿತ್ತು.

ಭಾರತದ ಪರ ಏಕೈಕ ವೇಗದ ಬೌಲರ್ ಕಣಕ್ಕಿಳಿಯುತ್ತಿದ್ದಾರೆ. ಗಾಯದಿಂದ ಚೇತರಿಸಿಕೊಂಡು ಟೀಮ್ ಇಂಡಿಯಾಗೆ ವಾಪಸ್ ಆಗಿರುವ ಮೊಹಮ್ಮದ್ ಶಮಿ ಆಡುವ ನಿರೀಕ್ಷೆಯಿತ್ತು. ಆದರೆ, ಅವರಿಗೆ ಮೊದಲ ಟಿ20 ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕಿಲ್ಲ. ಭಾರತದ ಏಕೈಕ ವೇಗದ ಬೌಲರ್‌ ಆಗಿ ಅರ್ಷದೀಪ್ ಸಿಂಗ್ ಆಡುವ ಹನ್ನೊಂದರಲ್ಲಿ ಸ್ಥಾನ ಪಡೆದಿದ್ದಾರೆ.

ಹಾರ್ದಿಕ್ ಪಾಂಡ್ಯ, ನಿತೀಶ್‌ಕುಮಾರ್ ರೆಡ್ಡಿ ಮತ್ತು ಉಪನಾಯಕ ಅಕ್ಸರ್ ಪಟೇಲ್ ಮೂವರು ಆಲ್‌ರೌಂಡರ್ ವಿಭಾಗದಲ್ಲಿದ್ದಾರೆ. ಇನ್ನೂ ಸ್ಪಿನ್ನರ್‌ಗಳಾಗಿ ರವಿ ಬಿಷ್ಣೋಯ್ ಮತ್ತು ವರುಣ್ ಚಕ್ರವರ್ತಿ ಅವರಿದ್ದಾರೆ. ಉಳಿದಂತೆ ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಭಾರತ ತಂಡದ ಟಾಪ್ ಆರ್ಡರ್ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ. ಫಿನಿಶರ್‌ ಪಾತ್ರಕ್ಕೆ ರಿಂಕು ಸಿಂಗ್‌ ಅವರಿಗೆ ಆಡುವ ಹನ್ನೊಂದರಲ್ಲಿ ಅವಕಾಶ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments