Select Your Language

Notifications

webdunia
webdunia
webdunia
webdunia

ಮೊದಲ ಟೆಸ್ಟ್: ಶ್ರೀಲಂಕಾ ವಿರುದ್ಧ ಭಾರತ ಜಯಭೇರಿ

ಮೊದಲ ಟೆಸ್ಟ್: ಶ್ರೀಲಂಕಾ ವಿರುದ್ಧ ಭಾರತ ಜಯಭೇರಿ
ಗಾಲೆ , ಶನಿವಾರ, 29 ಜುಲೈ 2017 (16:47 IST)
ಶ್ರೀಲಂಕಾದ ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಎದುರಾಳಿ ಲಂಕಾ ತಂಡದ ವಿರುದ್ಧ 304 ರನ್‌ಗಳ ಅಂತರದಿಂದ ಭರ್ಜರಿ ಜಯಭೇರಿ ಬಾರಿಸಿದೆ.
 
ಮೂರು ಟೆಸ್ಟ್‌ಗಳ ಸರಣಿಯಲ್ಲಿ ಭಾರತ 1-0 ದಿಂದ ಮುನ್ನಡೆ ಸಾಧಿಸಿದೆ. ಟೀಂ ಇಂಡಿಯಾ ತಂಡದ ಅತ್ಯುತ್ತಮ ಬೌಲಿಂಗ್ ಮತ್ತು ಬ್ಯಾಟಿಂಗ್‌‌ನಿಂದಾಗಿ ಎದುರಾಳಿ ಲಂಕಾ ತಂಡ ಸೋಲನುಭವಿಸಿತು.
 
ಶ್ರೀಲಂಕಾ ಮೊದಲ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ನಷ್ಟಕ್ಕೆ 291 ರನ್‌ಗಳಿಸಿದ್ದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ನಷ್ಟಕ್ಕೆ 245 ರನ್‌ಗಳನ್ನು ಪೇರಿಸಲು ಮಾತ್ರ ಶಕ್ತವಾಗಿತ್ತು.  
 
ಭಾರತ ತಂಡ, ಮೊದಲ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ನಷ್ಟಕ್ಕೆ 600 ರನ್‌ಗಳ ಬೃಹತ್ ಸವಾಲ್‌ ಒಡ್ಡಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್ ನಷ್ಟಕ್ಕೆ 240 ರನ್‌ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಧೋನಿ ಮೇಲೆ ಕೇಸ್! ಸಂಕಷ್ಟದಲ್ಲಿ ಮಾಹಿ!