ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

Sampriya
ಭಾನುವಾರ, 15 ಜೂನ್ 2025 (14:13 IST)
Photo Courtesy X
ಲಂಡನ್‌: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಅವರ ತಾಯಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಹೀಗಾಗಿ ತುರ್ತಾಗಿ ಭಾರತಕ್ಕೆ ವಾಪಸಾಗಿದ್ದಾರೆ. 

ಗಂಭೀರ್‌ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಅಭ್ಯಾಸ ಮುಂದುವರೆಸಿದ್ದು, ಈ ವಾರ ಗೌತಮ್ ಗಂಭೀರ್ ಇಂಗ್ಲೆಂಡ್​ಗೆ ಮರಳದಿದ್ದರೆ ಹಂಗಾಮಿ ಕೋಚ್​ನ ನೇಮಕ ಸಾಧ್ಯತೆಯಿದೆ. 

ಜೂನ್ 20 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ವಿವಿಎಸ್​ ಲಕ್ಷ್ಮಣ್ ಭಾರತ ತಂಡದ ಹಂಗಾಮಿ ಕೋಚ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ತನ್ನ ಸಿದ್ಧತೆಗಳನ್ನು ಚುರುಕುಗೊಳಿಸುವಲ್ಲಿ ನಿರತವಾಗಿದೆ. ಹೊಸ ನಾಯಕ ಶುಭಮನ್ ಗಿಲ್ ನೇತೃತ್ವದಲ್ಲಿ ಟೀಮ್ ಇಂಡಿಯಾ ತಂಡ ಲಂಡನ್​ನಲ್ಲಿ ಅಭ್ಯಾಸ ನಡೆಸುತ್ತಿದೆ. ಆದರೆ, ಈ ಅಭ್ಯಾಸದ ವೇಳೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಕಾಣಿಸಿಕೊಂಡಿಲ್ಲ.

ಗೌತಮ್ ಗಂಭೀರ್ ಭಾರತಕ್ಕೆ ಹಿಂತಿರುಗುತ್ತಿದ್ದಂತೆ, ಬಿಸಿಸಿಐ  ವಿವಿಎಸ್​ ಲಕ್ಷ್ಮಣ್ ಅವರನ್ನು ಇಂಗ್ಲೆಂಡ್​ಗೆ ಕಳುಹಿಸಿದ್ದಾರೆ. ಅಲ್ಲದೆ ಜೂನ್ 20 ರೊಳಗೆ ಗಂಭೀರ್​ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಪರಿಸ್ಥಿತಿ ಇರದಿದ್ದರೆ, ಭಾರತ ತಂಡವು ಲಕ್ಷ್ಮನ್ ಮುಂದಾಳತ್ವದಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ತಂತ್ರಗಳನ್ನು ರೂಪಿಸಲಿದೆ.

ಈಗಾಗಲೇ ವಿವಿಎಸ್ ಲಕ್ಷ್ಮಣ್ ಅವರು ಇಂಗ್ಲೆಂಡ್​ನಲ್ಲಿರುವ ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಭಾರತ ಮತ್ತು ಭಾರತ ಎ ತಂಡಗಳ ನಡುವಣ ಅಭ್ಯಾಸ ಪಂದ್ಯದ ವೇಳೆ ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್ ಅವರೊಂದಿಗೆ​ ಲಕ್ಷ್ಮಣ್ ಕಾಣಿಸಿಕೊಂಡರು.


 <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

ಮುಂದಿನ ಸುದ್ದಿ
Show comments