ನವದೆಹಲಿ: ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಮುಖ್ಯಸ್ಥರಿಂದಲೇ ಭಾರೀ ಅವ್ಯವಹಾರ ನಡೆದಿದೆ ಎಂದು ಮಾಜಿ ಕ್ರಿಕೆಟಿಗ, ಸಂಸದ ಹರ್ಭಜನ್ ಸಿಂಗ್ ಆರೋಪಿಸಿದ್ದಾರೆ.
ಈ ಬಗ್ಗೆ ಅವರು ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ನ ಸದಸ್ಯರಿಗೆ ಖಡಕ್ ಪತ್ರ ಬರೆದಿದ್ದಾರೆ. ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಅಕ್ರಮ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂದು ಭಜಿ ಆರೋಪಿಸಿದ್ದಾರೆ.
ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಗೆ ಸದಸ್ಯರನ್ನು ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಭಾರೀ ಅಕ್ರಮ ನಡೆಯುತ್ತಿದೆ ಎಂದು ಅಸೋಸಿಯೇಷನ್ ನ ಮುಖ್ಯ ಸಲಹೆಗಾರರೂ ಆಗಿರುವ ಹರ್ಭಜನ್ ಸಿಂಗ್ ಆರೋಪ ಮಾಡಿದ್ದಾರೆ.
-Edited by Rajesh Patil