Webdunia - Bharat's app for daily news and videos

Install App

ಹಾರ್ದಿಕ್ ಪಾಂಡ್ಯ ಆಲ್ ರೌಂಡರ್ ಆಟಕ್ಕೆ ಸೋತ ಇಂಗ್ಲೆಂಡ್

Webdunia
ಶುಕ್ರವಾರ, 8 ಜುಲೈ 2022 (08:00 IST)
ಸೌಥಾಂಪ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 50 ರನ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.

ಈ ಪಂದ್ಯ ಸಂಪೂರ್ಣವಾಗಿ ಹಾರ್ದಿಕ್ ಪಾಂಡ್ಯ ಶೋ ಆಗಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತು. ರೋಹಿತ್ ಶರ್ಮಾ 24, ದೀಪಕ್ ಹೂಡಾ 33, ಸೂರ್ಯಕುಮಾರ್ ಯಾದವ್ 39 ರನ್ ಗಳಿಸಿದರೆ ಹಾರ್ದಿಕ್ ಪಾಂಡ್ಯ ಬಿರುಸಿನ  51 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ಗೆ ಭುವನೇಶ್ವರ್ ಕುಮಾರ್ ಆರಂಭದಲ್ಲೇ ಆಘಾತವಿಕ್ಕಿದರು. ಇನ್ ಫಾರ್ಮ್ ಬ್ಯಾಟಿಗ ಜೋಸ್ ಬಟ್ಲರ್ ರನ್ನು ಶೂನ್ಯಕ್ಕೆ ಔಟ್ ಮಾಡಿದರು. ಬಳಿಕ ಜೇಸನ್ ರಾಯ್ ಕೂಡಾ 4 ರನ್ ಗೆ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು. ಈ ನಡುವೆ ಡೇವಿಡ್ ಮಲನ್ 24, ‍ಹ್ಯಾರಿ ಬ್ರೂಕ್ 28 ಮೊಯಿನ್ ಅಲಿ 36 ಮತ್ತು ಕ್ರಿಸ್ ಜೋರ್ಡನ್ ಅಜೇಯ 26 ರನ್ ಗಳಿಸಿದರು. ಆದರೆ ಕಾಲ ಕಾಲಕ್ಕೆ ಟೀಂ ಇಂಡಿಯಾ ವಿಕೆಟ್ ಕೀಳಲು ಸಾಧ‍್ಯವಾಗಿದ್ದರಿಂದ ಇಂಗ್ಲೆಂಡ್ ಇನಿಂಗ್ಸ್ 19.3 ಓವರ್ ಗಳಲ್ಲಿ 148 ರನ್ ಗಳಿಗೆ ಕೊನೆಯಾಯಿತು. ಬೌಲಿಂಗ್ ನಲ್ಲೂ ಮಿಂಚಿದ ಹಾರ್ದಿಕ್ ಪಾಂಡ್ಯ 4 ವಿಕೆಟ್ ಕಬಳಿಸಿದರು. ಉಳಿದಂತೆ ಅರ್ಷ್ ದೀಪ್ ಸಿಂಗ್ ಮತ್ತು ಯಜುವೇಂದ್ರ ಚಾಹಲ್ ತಲಾ 2 ವಿಕೆಟ್ ಹಾಗೂ ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್ ತಲಾ 1 ವಿಕೆಟ್ ತಮ್ಮದಾಗಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮುಂದಿನ ಸುದ್ದಿ
Show comments