Publish Date: Wed, 08 Sep 2021 (11:37 IST)
Updated Date: Wed, 08 Sep 2021 (11:41 IST)
ಮುಂಬೈ: ಮುಂಬರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಆಯ್ಕೆಗೆ ಕ್ಷಣಗಣನೆ ಆರಂಭವಾಗಿದ್ದು, ಟೀಂ ಇಂಡಿಯಾದಲ್ಲಿ ಯಾರೆಲ್ಲಾ ಇರಬಹುದು ಎಂಬ ಕುತೂಹಲ ಹೆಚ್ಚಾಗಿದೆ.
ಈ ನಡುವೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ಸಿಗುವ ಸಾಧ‍್ಯತೆ ಕಡಿಮೆ ಎನ್ನಲಾಗಿದೆ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಹಾರ್ದಿಕ್ ಕಳಪೆ ಪ್ರದರ್ಶನ ನೀಡಿದ್ದರು. ಅಲ್ಲದೆ, ಅವರೀಗ ಪೂರ್ಣಪ್ರಮಾಣದಲ್ಲಿ ಬೌಲಿಂಗ್ ಮಾಡಲೂ ಆರೋಗ್ಯ ಸಾಥ್ ಕೊಡುತ್ತಿಲ್ಲ.
ಹೀಗಾಗಿ ಪಾಂಡ್ಯಗೆ ಕೊಕ್ ನೀಡುವ ಸಾಧ‍್ಯತೆಯೇ ಹೆಚ್ಚು ಎನ್ನಲಾಗಿದೆ. ಅವರ ಬದಲಿಗೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನವಿತ್ತ ಶ್ರಾದ್ಧೂಲ್ ಠಾಕೂರ್ ಗೆ ಅವಕಾಶ ಸಿಗುವ ಸಾಧ್ಯತೆಯಿದೆ.