Publish Date: Fri, 08 Jul 2022 (09:00 IST)
Updated Date: Fri, 08 Jul 2022 (09:33 IST)
ಸೌಥಾಂಪ್ಟನ್: ಇಂಗ್ಲೆಂಡ್ ವಿರುದ್ಧ ಆಲ್ ರೌಂಡರ್ ಪ್ರದರ್ಶನದ ಮೂಲಕ ತಂಡದ ಗೆಲುವಿಗೆ ಕಾರಣರಾದ ಹಾರ್ದಿಕ್ ಪಾಂಡ್ಯ ಹೊಸ ದಾಖಲೆ ಮಾಡಿದ್ದಾರೆ.
ನಿನ್ನೆಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅರ್ಧಶತಕ ಸಿಡಿಸಿದ್ದಲ್ಲದೆ, ಬೌಲಿಂಗ್ ನಲ್ಲಿ ನಾಲ್ಕು ವಿಕೆಟ್ ಕಿತ್ತಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್ ನಲ್ಲಿ ಹಾರ್ದಿಕ್ ಪಾಂಡ್ಯ ಟಿ20 ಪಂದ್ಯವೊಂದರಲ್ಲಿ 50 ಪ್ಲಸ್ ರನ್ ಮತ್ತು 4 ವಿಕೆಟ್ ಕಿತ್ತ ಮೊದಲ ಭಾರತೀಯ ಆಟಗಾರ ಎಂಬ ದಾಖಲೆ ಮಾಡಿದರು.