ಮುಂಬೈ: ಏಕದಿನ ವಿಶ್ವಕಪ್ ಪಂದ್ಯದ ವೇಳೆ ಕಾಲಿನ ಗಾಯಕ್ಕೊಳಗಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಚೇತರಿಸಿಕೊಳ್ಳುತ್ತಿದ್ದು ಶೀಘ್ರದಲ್ಲೇ ತಂಡಕ್ಕೆ ವಾಪಸ್ ಆಗಲಿದ್ದಾರೆ ಎಂಬ ಸುದ್ದಿ ಬಂದಿದೆ.
ಪಾಂಡ್ಯ ಈಗ ಸಾಕಷ್ಟು ಚೇತರಿಸಿಕೊಂಡಿದ್ದು ಸದ್ಯದಲ್ಲೇ ಅಭ್ಯಾಸ ನಡೆಸಲು ಮೈದಾನಕ್ಕಿಳಿಯಲಿದ್ದಾರೆ. ಹೀಗಾಗಿ ಅವರು ಶೀಘ್ರದಲ್ಲೇ ತಂಡಕ್ಕೆ ವಾಪಸ್ ಆಗಲಿದ್ದಾರೆ ಎಂಬ ವಿಶ್ವಾಸ ಮೂಡಿದೆ.
ಹಾಗಿದ್ದರೂ ಅಕ್ಟೋಬರ್ 29 ರಂದು ಲಕ್ನೋದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಅವರು ಅಲಭ್ಯರಾಗಲಿದ್ದಾರೆ. ಅವರ ಸ್ಥಾನದಲ್ಲಿ ರವಿಚಂದ್ರನ್ ಅಶ್ವಿನ್ ಆಡುವ ಸಾಧ‍್ಯತೆಯಿದೆ. ಅಕ್ಟೋಬರ್ 19 ರಂದು ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಅವರು ಕಾಲಿನ ಗಾಯಕ್ಕೊಳಗಾಗಿದ್ದರು.