Anshul Kamboj: ಕೇರಳ ವಿರುದ್ಧ 10 ಕ್ಕೆ 10 ವಿಕೆಟ್ ಕಬಳಿಸಿದ ಅಂಶುಲ್ ಕಾಂಬೋಜ್ ದಾಖಲೆ

Krishnaveni K
ಶುಕ್ರವಾರ, 15 ನವೆಂಬರ್ 2024 (13:12 IST)
Photo Credit: X
ರೋಹ್ಟಕ್: ಕೇರಳ ಮತ್ತು ಹರ್ಯಾಣ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಹರ್ಯಾಣದ ಅಂಶುಲ್ ಕಾಂಬೋಜ್ ಇನಿಂಗ್ಸ್ ನ ಎಲ್ಲಾ 10 ವಿಕೆಟ್ ಗಳನ್ನು ಕಬಳಿಸಿ ದಾಖಲೆ ಬರೆದಿದ್ದಾರೆ.

ಒಂದೇ ಇನಿಂಗ್ಸ್ ನಲ್ಲಿ ಎಲ್ಲಾ 10 ವಿಕೆಟ್ ಗಳನ್ನು ಪಡೆದ ಅಪರೂಪದ ದಾಖಲೆ ಯುವ ಬೌಲರ್ ನದ್ದಾಗಿದೆ. ಹರ್ಯಾಣದ ಅಂಶುಲ್ ಈಗ ರಣಜಿ ಟ್ರೋಫಿಯಲ್ಲಿ ಈ ದಾಖಲೆ ಮಾಡಿದ ಕೇವಲ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲ ಭಾರತದ ಪರ ದೇಶೀಯ ಅಥವಾ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಈ ದಾಖಲೆ ಮಾಡಿದ ಆರನೇ ಬೌಲರ್ ಎನಿಸಿಕೊಂಡಿದ್ದಾರೆ.

ಒಟ್ಟು 30.1 ಓವರ್ ಮಾಡಿದ ಅಂಶುಲ್ 49 ರನ್ ನೀಡಿ ಎಲ್ಲಾ 10 ವಿಕೆಟ್ ಗಳನ್ನು ತಮ್ಮ ಬುಟ್ಟಿಗೆ ಹಾಕಿಕೊಂಡಿದ್ದಾರೆ. ಇದರಿಂದಾಗಿ ಕೇರಳ ಮೂರನೇ ದಿನದಾಟದಲ್ಲಿ 291 ರನ್ ಗಳಿಗೆ ಆಲೌಟ್ ಆಗಿದೆ. 23 ವರ್ಷದ ವೇಗಿಯ ಸಾಧನೆಗೆ ಕ್ರಿಕೆಟ್ ಜಗತ್ತು ಕೊಂಡಾಡುತ್ತಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಭಾರತದ ಪರ ಆಡಿ ಇನಿಂಗ್ಸ್ ನ ಎಲ್ಲಾ 10 ವಿಕೆಟ್ ಗಳನ್ನು ಕಬಳಿಸಿದ ದಾಖಲೆ ಅನಿಲ್ ಕುಂಬ್ಳೆ ಹೆಸರಿನಲ್ಲಿದೆ. ರಣಜಿ ಟ್ರೋಫಿಯಲ್ಲಿ ಇದಕ್ಕೆ ಮೊದಲು ಬೆಂಗಾಳ ತಂಡದ ಪ್ರೇಮಾಂಶು ಚ್ಯಾಟರ್ಜಿ, ರಾಜಸ್ತಾನದ ಪ್ರದೀಪ್ ಸುಂದರಮ್ ಈ ಸಾಧನೆ ಮಾಡಿದ್ದರು. ಇದೀಗ ಅಂಶುಲ್ ಈ ಸಾಧನೆ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಮುಂದಿನ ಸುದ್ದಿ
Show comments