Publish Date: Sun, 26 Feb 2023 (09:30 IST)
Updated Date: Sun, 26 Feb 2023 (09:31 IST)
ನವದೆಹಲಿ: ಕೆಲವು ದಿನಗಳ ಹಿಂದೆ ರಸ್ತೆ ಅಪಘಾತಕ್ಕೀಡಾಗಿದ್ದ ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ತಮ್ಮ ಆರೋಗ್ಯ ಸ್ಥಿತಿ ಬಗ್ಗೆ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದರು.
ರಿಷಬ್ ಗೆ ಮುಂಬೈನಲ್ಲಿ ಕಾಲಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅದಾದ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದು, ಕೆಲವು ದಿನಗಳ ಆಸ್ಪತ್ರೆ ವಾಸದ ಬಳಿಕ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಇದೀಗ ರಿಷಬ್ ಊರುಗೋಲಿನ ಸಹಾಯದೊಂದಿಗೆ ಕೆಲವು ಹೆಜ್ಜೆ ಹಾಕುವ ಹಂತಕ್ಕೆ ಬಂದಿದ್ದಾರೆ. ಈ ಫೋಟೋಗಳನ್ನು ರಿಷಬ್ ಹಂಚಿಕೊಂಡಿದ್ದಾರೆ. ಆದರೆ ಅವರ ಕಾಲುಗಳು ಊದಿಕೊಂಡಿದ್ದು, ಸುಧಾರಿಸಿಕೊಳ್ಳಲು ಇನ್ನಷ್ಟು ಸಮಯ ಹಿಡಿಯಲಿದೆ ಎನ್ನುವುದು ಪಕ್ಕಾ ಆಗಿದೆ.